ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

Date:

ಪ್ರಧಾನಿ ನರೇಂದ್ರ ಮೋದಿ ಜಪಾನ್‌ಗೆ ಹೋದಾಗಲೆಲ್ಲಾ ಭಾರತದಲ್ಲಿ ನೋಟು ನಿಷೇಧ ಹೇರುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀ ಕರಿಸಿದ ನಂತರ ಮಾತನಾಡಿದ ಖರ್ಗೆ, “ಕಳೆದ ಬಾರಿ 2016ರಲ್ಲಿ ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೂ. 1,000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರು. ಈ ಬಾರಿ 2,000 ರೂ. ನೋಟುಗಳನ್ನು ನಿಷೇಧಿಸಿದ್ದಾರೆ” ಎಂದು ಹೇಳಿದರು.

“ಇಂತಹ ಕ್ರಮಗಳಿಂದ ದೇಶಕ್ಕೆ ಲಾಭವಿಲ್ಲ , ಬದಲು ನಷ್ಟವಾಗಲಿದೆ. ದೇಶದ ಜನರನ್ನು ಒಂದಲ್ಲ ಒಂದು ವಿಧದಲ್ಲಿ ತೊಂದರೆಗೊಳಪಡಿಸುವುದು ಮೋದಿ ಅವರಿಗೆ ಬೇಕಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

“ರಾಜ್ಯ ದ ಹೊಸ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದಂತಲ್ಲ. ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಮುನ್ನಡೆಯಲಿದೆ. ಬಿಜೆಪಿಯಂತೆ ನಾವು ಜನರಿಗೆ ಕೈಕೊಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಮಾತುಗಳನ್ನು ಉಳಿಸಿಕೊಳ್ಳಲಿದೆ,” ಎಂದು ಖರ್ಗೆ ಹೇಳಿದರು.

2 ಸಾವಿರ ಮುಖಬೆಲೆಯ ನೋಟುಗಳನ್ನು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಒಂದು ಬಾರಿಗೆ 20 ಸಾವಿರದವರೆಗೆ ಮಾತ್ರವೇ ಬದಲಾಯಿಸಿಕೊಳ್ಳಬಹುದು ಎನ್ನುವ ಮಿತಿಯನ್ನು ಆರ್‌ಬಿಐ ವಿಧಿಸಿದೆ. ಬ್ಯಾಂಕ್ ಶಾಖೆಗಳ ದೈನಂದಿನ ಕೆಲಸಗಳಿಗೆ ಅಡಚಣೆ ಆಗಬಾರದು ಎಂಬ ಕಾರಣಕ್ಕೆ ಈ ಮಿತಿಯನ್ನು ಹೇರಲಾಗಿದೆ.

2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ದೊಡ್ಡ ನೋಟುಗಳನ್ನು ರದ್ದುಗೊಳಿಸಿ ಸಂಚಲನ ಮೂಡಿಸಿದ್ದರು. ಭ್ರಷ್ಟಾಚಾರ ಮತ್ತು ಕಪ್ಪುಹಣ ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ಬ್ಯಾನ್ ಮಾಡಿ 2000 ನೋಟು ಪರಿಚಯಿಸಿತ್ತು.

1000 ರೂಪಾಯಿ ನೋಟುಗಳಿಂದ ಕಪ್ಪುಹಣ ಹೆಚ್ಚುತ್ತದೆ ಎಂದು ಹೇಳಿದಾಗ 2000 ನೋಟು ಚಲಾವಣೆಗೆ ಟೀಕೆ ವ್ಯಕ್ತವಾಗಿತ್ತು. ಮತ್ತೊಂದೆಡೆ 500 ರೂಪಾಯಿಯ ಹಳೆಯ ನೋಟು ರದ್ದು ಮಾಡಿ ಹೊಸ 500 ರೂಪಾಯಿ ನೋಟು ಚಲಾವಣೆಗೆ ಬಂದಿತ್ತು.

ಆಗಿನ ಸಮಯದಲ್ಲಿ ದೇಶದ ಜನತೆ ಕರೆನ್ಸಿ ವಿನಿಮಯಕ್ಕೆ ಬ್ಯಾಂಕ್‌ಗಳ ಮೊರೆ ಹೋಗಿದ್ದನ್ನು ಯಾರೂ ಮರೆಯುವಂತಿಲ್ಲ. ಇದೀಗ ಮತ್ತೊಮ್ಮೆ ಅದೇ ರೀತಿ ಆರ್‌ಬಿಐ ಶಾಕ್ ನೀಡಿದ್ದಕ್ಕೆ ವಿಪಕ್ಷಗಳು ಕಿಡಿಕಾರಿವೆ. 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...