ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

Date:

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಜಾಮೀನು  ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್‌ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ (ಏಪ್ರಿಲ್ 3) ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದರು.

ರಾಹುಲ್‌ ಗಾಂಧಿಯವರ ಮನವಿಯನ್ನು ಆಲಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಮಂಜೂರು ಮಾಡಿರುವುದಕ್ಕೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್‌ ಗಾಂಧಿ” ‘ಮಿತ್ರಕಾಲ’ದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಇದಾಗಿದೆ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ!” ಎಂದು ಬರೆದುಕೊಂಡಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ಅರ್ಜಿ ಸಲ್ಲಿಕೆಗೆ 30 ದಿನಗಳ ಕಾಲಾವಕಾಶ ಒದಗಿಸಿತ್ತು.

ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ನಂತರ ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿತ್ತು. 

2019ರಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭ ಕೋಲಾರದಲ್ಲಿ ನೀಡಿದ ಹೇಳಿಕೆ ವಿರುದ್ಧ ಗುಜರಾತಿನ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ವಿಶ್ವ ಡಿಜಿಟಲ್ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ | ಕೇಂದ್ರದ ದತ್ತಾಂಶ

ಭಾರತ 2022ರಲ್ಲಿ 8.95 ಲಕ್ಷ ಡಿಜಿಟಲ್ ಪಾವತಿ ವಹಿವಾಟು ನಡೆಸಿದೆ 9 ವರ್ಷದಲ್ಲಿ...

3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆ ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್...

ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ...

ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೊರ್‌ಜಾಯ್‌ | 3 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಬಂಗಾಳಿ ಭಾಷೆಯಲ್ಲಿ...