ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳೊಂದಿಗೆ ಕಾಂಗ್ರೆಸ್ ಸಭೆ

Date:

ರಾಹುಲ್‌ ಗಾಂಧಿ ಸದಸ್ಯತ್ವ ಅನರ್ಹತೆ ವಿಚಾರದಲ್ಲಿ ಪಕ್ಷಪಾತ ಧೋರಣೆ ಅನುಸರಿಸಿರುವ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಹಕರಿಸುವಂತೆ 19 ವಿರೋಧ ಪಕ್ಷಗಳೊಂದಿಗೆ ಕಾಂಗ್ರೆಸ್ ಮಾತುಕತೆ ನಡೆಸಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರ ಸಭೆ ಕರೆದ ಒಂದು ದಿನದ ನಂತರ, 19 ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಂಗಳವಾರ ಹೇಳಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ವಿರೋಧ ಪಕ್ಷಗಳನ್ನು ಸಜ್ಜುಗೊಳಿಸುವ ತನ್ನ ಯೋಜನೆಯಲ್ಲಿ ಕಾಂಗ್ರೆಸ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ತರಲು ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಯೋಜಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಸಂಸದರ ಸಭೆಯಲ್ಲಿ ಮುಂದಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷ ನಾಯಕರ ಸಭೆ ಕರೆದಿದ್ದರು. ಉದ್ಧವ್ ಠಾಕ್ರೆ ಅವರ ಶಿವಸೇನೆ ಸೇರಿದಂತೆ 19 ವಿರೋಧ ಪಕ್ಷಗಳು ಕಾಂಗ್ರೆಸ್ ಜೊತೆಯಲ್ಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...