ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ. ಬಂಧನದ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಖಚಿತಪಡಿಸಿದ್ದಾರೆ.
“ಫಿಜಾಮ್ ಹೇಮಂಜಿತ್ (20) ಮತ್ತು ಹಿಜಾಮ್ ಲಿಂಟೋಯಿಂಗಂಬಿ(17) ಅವರ ಅಪಹರಣ ಮತ್ತು ಕೊಲೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಇಂದು ಚುರಚಂದಪುರದಿಂದ ಬಂಧಿಸಲಾಗಿದೆ. ಅಪರಾಧ ಮಾಡಿದ ನಂತರ ಪರಾರಿಯಾಗಬಹುದು, ಆದರೆ ಅವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರು ಮಾಡಿದ ಘೋರ ಅಪರಾಧಕ್ಕೆ ಮರಣದಂಡನೆ ಸೇರಿದಂತೆ ಗರಿಷ್ಠ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ ಗುಜರಾತ್: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ
ಮೇ 3 ರಂದು ಜನಾಂಗೀಯ ಹಿಂಸಾಚಾರ ಪ್ರಾರಂಭವಾದ ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಕಣಿವೆ ಜಿಲ್ಲೆ ಚುರಚಂದ್‌ಪುರದಿಂದ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.
ಹಿರಿಯ ಪೊಲೀಸ್ ಅಧೀಕ್ಷಕ ನೆಕ್ಟರ್ ಸಂಜೆನ್ಬಮ್ ಅವರು ಚುರಾಚಂದ್‌ಪುರದಲ್ಲಿ ಶಂಕಿತರನ್ನು ಹಿಡಿಯಲು ಕಠಿಣ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ತೋರಿಸುವ ಫೋಟೋಗಳು ಸೆಪ್ಟೆಂಬರ್ 26 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ನಂತರದಲ್ಲಿ ಮಣಿಪುರದಲ್ಲಿ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿತು. ಮಣಿಪುರ ಸರ್ಕಾರ ಇಂಟರ್‌ನೆಟ್ ಸ್ಥಗಿತ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು.