ದೆಹಲಿ ಸರ್ಕಾರದ ಅಧಿಕಾರ ನಿರ್ಬಂಧಿತ; ಹಸ್ತಕ್ಷೇಪಕ್ಕೆ ಎಲ್‌ಜಿಗೆ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

Date:

ದೆಹಲಿ ವಿಧಾನಸಭೆ ಮತ್ತು ಚುನಾಯಿತ ಸರ್ಕಾರದ ಶಾಸಕಾಂಗ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ ಗುರುವಾರ ತೀರ್ಪು ನೀಡಿದೆ. ಇತರ ರಾಜ್ಯಗಳಂತೆ ಎಲ್‌ಜಿ ಕೂಡ ದೆಹಲಿ ಸರ್ಕಾರಕ್ಕೆ ಸಲಹೆ ನೀಡಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಎಎಪಿ ನೇತೃತ್ವದ ದೆಹಲಿ ಸರ್ಕಾರವು ಅಧಿಕಾರ ಸೇವೆಗಳ ನಿಯಂತ್ರಣದ ಮೇಲೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿರಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿತ್ತು.

ಕೇಂದ್ರದೊಂದಿಗಿನ ತನ್ನ ಅಧಿಕಾರದ ಸ್ಪಷ್ಟವಾದ ಗಡಿರೇಖೆಯನ್ನು ಸುಪ್ರೀಂ ಕೋರ್ಟ್‌ನಿಂದ ಕೋರಿತ್ತು. ಈ ವರ್ಷದ ಜನವರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಂ ಆರ್ ಶಾ, ಕೃಷ್ಣ ಮುರಾರಿ, ಪಿ ಎಸ್ ನರಸಿಂಹ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ನಾಲ್ಕು ದಿನಗಳ ಕಾಲ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿತ್ತು.

ಸುಪ್ರೀಂ ತೀರ್ಪು ಸ್ವಾಗತಿಸಿದ ಎಎಪಿ

ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಆಡಳಿತರೂಢ ಎಎಪಿ ಸ್ವಾಗತಿಸಿದ್ದು, ‘ಇದು ದೊಡ್ಡ ಗೆಲುವು’ ಎಂದು ತಿಳಿಸಿದೆ.

ತೀರ್ಪನ್ನು ಸ್ವಾಗತಿಸಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಎಎಪಿ, “ಚುನಾಯಿತ ಸರ್ಕಾರಕ್ಕೆ ಅಧಿಕಾರಿಗಳ ವರ್ಗಾವಣೆ ಹಂಚಿಕೆ ಮಾಡುವ ಅಧಿಕಾರವಿರುತ್ತದೆ. ಅಧಿಕಾರಿಗಳು ಚುನಾಯಿತ ಸರ್ಕಾರದ ಮೂಲಕ ಮಾತ್ರ ಕೆಲಸ ಮಾಡುತ್ತಾರೆ” ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು “ಐತಿಹಾಸಿಕ ನಿರ್ಧಾರ” ಎಂದು ಕರೆದಿರುವ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರು, ಇದು ಕೇಂದ್ರಕ್ಕೆ ಕಠಿಣ ಸಂದೇಶವನ್ನು ರವಾನಿಸಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...