ಜಾಮಿಯಾ ಮಿಲಿಯಾ ಪ್ರಕರಣ | ಶಾರ್ಜೀಲ್ ಇಮಾಮ್, ಸಫೂರಾ ಬಿಡುಗಡೆ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

Date:

ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 2019ರಂದು ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿ ಹೋರಾಟಗಾರರಾದ ಶಾರ್ಜೀಲ್ ಇಮಾಮ್, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ ಹಾಗೂ ಎಂಟು ಜನರ ಬಿಡುಗಡೆಗೆ ವಿಚಾರಣಾ ನ್ಯಾಯಾಲಯ ನೀಡಿದ ಆದೇಶವನ್ನು ದೆಹಲಿ ಹೈಕೋರ್ಟ್‌ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಆದೇಶ ನೀಡಿದ್ದು, “ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನಿರಾಕರಿಸದೆ ಇದ್ದರೂ, ಈ ನ್ಯಾಯಾಲಯ ತನ್ನ ಕರ್ತವ್ಯವನ್ನು ಅರಿತು ಆ ರೀತಿಯಲ್ಲಿ ಪ್ರಕರಣವನ್ನು ನಿರ್ಧರಿಸಲು ಯತ್ನಿಸಿದೆ. ಶಾಂತಿಯುತವಾಗಿ ಸಭೆ ಸೇರುವ ಹಕ್ಕಿಗೂ ನಿರ್ಬಂಧ ಹೇರಬಹುದಾಗಿದೆ. ಆಸ್ತಿ ಮತ್ತು ಶಾಂತಿಗೆ ಧಕ್ಕೆ ತಂದವರಿಗೆ ರಕ್ಷಣೆ ಒದಗಿಸುವುದಿಲ್ಲ” ಎಂದು ವಿವರಿಸಿದ್ದಾರೆ.  

ವಿಚಾರಣಾ ನ್ಯಾಯಾಲಯದ ಆದೇಶವನ್ನು ಭಾಗಶಃ ರದ್ದುಗೊಳಿಸಿದ ನ್ಯಾಯಾಲಯ ಇಮಾಮ್, ತನ್ಹಾ ಮತ್ತು ಜರ್ಗರ್ ಸೇರಿದಂತೆ ಹನ್ನೊಂದು ಆರೋಪಿಗಳಲ್ಲಿ ಒಂಬತ್ತು ಮಂದಿಯ ವಿರುದ್ಧ ಗಲಭೆ, ಅಕ್ರಮ ಸಭೆ ಸೇರುವಿಕೆ ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಆರೋಪ ನಿಗದಿಪಡಿಸಿತು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ನರೇಂದ್ರ ಮೋದಿ ಒಬ್ಬ ಹೇಡಿ: ಪ್ರಿಯಾಂಕ ವಾದ್ರಾ ಕಿಡಿ

ಭಾರತ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯಿದೆಯಡಿ ಇಮಾಮ್, ಜರ್ಗರ್, ಮೊಹಮ್ಮದ್ ಖಾಸಿಮ್, ಮಹಮೂದ್ ಅನ್ವರ್, ಶಹಜರ್ ರಾಜಾ, ಉಮೈರ್ ಅಹ್ಮದ್, ಮೊಹಮ್ಮದ್ ಬಿಲಾಲ್ ನದೀಮ್ ಹಾಗೂ ಚಂದಾ ಯಾದವ್ ವಿರುದ್ಧ ಆರೋಪ ಹೊರಿಸಲಾಗಿದೆ.

ಆರೋಪಿಗಳಾದ ಮೊಹಮ್ಮದ್ ಶೋಯೆಬ್ ಮತ್ತು ಮೊಹಮ್ಮದ್ ಅಬುಜಾರ್ ವಿರುದ್ಧ ಐಪಿಸಿ ಸೆಕ್ಷನ್ 143ರ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಉಳಿದೆಲ್ಲಾ ಅಪರಾಧಗಳಿಂದ ಮುಕ್ತಗೊಳಿಸಲಾಗಿದೆ. ತನ್ಹಾ ಅವರನ್ನು ಐಪಿಸಿ ಸೆಕ್ಷನ್ 308, 323, 341 ಮತ್ತು 435ರಿಂದ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಉಳಿದ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಪ್ರಸ್ತುತ ಪ್ರಕರಣವು ಡಿಸೆಂಬರ್ 2019ರಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಆವರಣ ಮತ್ತು ವಿವಿಯ ಸುತ್ತಮುತ್ತ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೊಳಿಸುವುದರ ವಿರುದ್ಧ ಪ್ರತಿಭಟಿಸಲು ಕೆಲ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಸಂಸತ್‌ನತ್ತ ಮೆರವಣಿಗೆ ಹೊರಡುವುದಾಗಿ ಘೋಷಿಸಿದ ಬಳಿಕ ಹಿಂಸಾಚಾರ ಸಂಭವಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗಾಗಳಲ್ಲಿ ನಾಯಿ ಮಾಂಸ ಸೇವನೆ ಒಪ್ಪಿತ ಆಹಾರ ಸಂಪ್ರದಾಯ: ಸರ್ಕಾರದ ನಿಷೇಧ ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ಸೇವನೆ ಮತ್ತು ಮಾರಾಟ ನಿಷೇಧಿಸಿ ರಾಜ್ಯ ಸರ್ಕಾರ...

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ: ರಾಜಸ್ಥಾನ ಹೈಕೋರ್ಟ್

ಮಗುವಿನ ಪಿತೃತ್ವ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವ ಅರ್ಜಿಯನ್ನು ತಿರಸ್ಕರಿಸಿದ ರಾಜಸ್ಥಾನ ಹೈಕೋರ್ಟ್,...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ...