ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್‌ ಕಾರ್ಯಕರ್ತ; ಕಾಂಗ್ರೆಸ್ ಆರೋಪ

Date:

ದೇಶದ ರಕ್ಷಣಾ ಕ್ಷೇತ್ರದ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ.

ಹನಿಟ್ರ್ಯಾಪ್‌ಗೆ ಒಳಗಾಗಿ ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ್ದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್‌ನನ್ನು ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿತ್ತು. ಆರೋಪಿಯನ್ನು ಮೇ 15ರವರೆಗೆ ಎಟಿಎಸ್ ವಶಕ್ಕೆ ನೀಡುವ ಆದೇಶವನ್ನು ಪುಣೆ ವಿಶೇಷ ನ್ಯಾಯಾಲಯ ನೀಡಿತ್ತು.

ಪ್ರದೀಪ್ ಕುರುಲ್ಕರ್‌ ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರ ಜತೆಗೆ ಭಾಗಿಯಾಗಿರುವ ವಿಡಿಯೋಗಳನ್ನು ಕಾಂಗ್ರೆಸ್ ವಕ್ತಾರರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಪಾಕಿಸ್ತಾನದ ಪರವಾಗಿ ಗೂಢಚರ್ಯೆ ಮಾಡಿರುವ ಪ್ರದೀಪ್, ಆರ್‌ಎಸ್‌ಎಸ್‌ನ ಕಟ್ಟಾ ಸ್ವಯಂ ಸೇವಕ ಎಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದೆಹಲಿ ಸರ್ಕಾರದ ಅಧಿಕಾರ ನಿರ್ಬಂಧಿತ; ಹಸ್ತಕ್ಷೇಪಕ್ಕೆ ಎಲ್‌ಜಿಗೆ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

‘ಪ್ರದೀಪ್ ಕುರುಲ್ಕರ್‌ ತಾತ ಕೂಡ ಆರ್‌ಎಸ್‌ಎಸ್‌ನ ಕಾರ್ಯಕರ್ತರಾಗಿದ್ದರು. ಇವರ ತಂದೆ ಕೂಡ ಸಂಘದ ಸಕ್ರಿಯ ಸದಸ್ಯರಾಗಿದ್ದರು.ರಾಷ್ಟ್ರೀಯವಾದಿ ಎಂದು ಬಿಂಬಿಸಿಕೊಳ್ಳುತ್ತಿರುವ ಸಂಘಟನೆಯ ನಿಜವಾದ ಬಣ್ಣ ಬಯಲಾಗಿದೆ. ಆರ್‌ಎಸ್‌ಎಸ್‌ ಹಾಗೂ ಪ್ರದೀಪ್‌ಗೂ ಇರುವ ಸಂಬಂಧ ಏನು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ವಿವರಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ವ್ಯಾಟ್ಸಪ್ ಹಾಗೂ ವಿಡಿಯೋ ಕಾಲ್‌ಗಳ ಮೂಲಕ ಪಾಕಿಸ್ತಾನದ ಗೂಢಚಾರಿಗಳ ಜೊತೆ ಪ್ರದೀಪ್ ಸಂಪರ್ಕದಲ್ಲಿದ್ದರು ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...