ಪಂಜಾಬ್ | ಅಮೃತಸರ ಸುವರ್ಣ ಮಂದಿರದ ಬಳಿ ಸ್ಫೋಟ ; ಹಲವರಿಗೆ ಗಾಯ

Date:

  • ಅಮೃತಸರ ನಗರದ ಸಾರಗಾರ್ಹಿ ಸಾರಾಯಿ ಪ್ರದೇಶದಲ್ಲಿ ಘಟನೆ
  • ಸ್ಫೋಟದಿಂದ ಪ್ರದೇಶದ ಕಟ್ಟಡ, ರೆಸ್ಟೋರೆಂಟ್‌ಗಳ ಗಾಜು ಪುಡಿ

ಪಂಜಾಬ್‌ನ ಅಮೃತಸರ ನಗರದ ಸುವರ್ಣ ಮಂದಿರದ ಬಳಿ ಶನಿವಾರ (ಮೇ 6) ತಡರಾತ್ರಿ ಸ್ಫೋಟ ಸಂಭವಿಸಿದ್ದು, ಹೆರಿಟೇಜ್‌ ಸ್ಟ್ರೀಟ್‌ ಪ್ರದೇಶದ ನಿವಾಸಿಗಳಲ್ಲಿ ಭೀತಿ ಆವರಿಸಿದೆ.

ಹೆರಿಟೇಜ್‌ ಸ್ಟ್ರೀಟ್‌ನಲ್ಲಿ ಮಧ್ಯರಾತ್ರಿ ವೇಳೆ ಪ್ರವಾಸಿಗರು ಮತ್ತು ಭಕ್ತರು ಸಂಚರಿಸುತ್ತಿದ್ದಾಗ ಸಾರಗಾರ್ಹಿ ಸಾರಾಯಿ ಪ್ರದೇಶದ ವಾಹನ ತಂಗುದಾಣ ಪ್ರದೇಶದಲ್ಲಿ ಸ್ಫೋಟ ಉಂಟಾಗಿದೆ.

ಅಮೃತಸರ ಹೆರಿಟೇಜ್‌ ಸ್ಟ್ರೀಟ್‌ನ ರೆಸ್ಟೋರೆಂಟ್‌ವೊಂದರ ಚಿಮಣಿಯಲ್ಲಿ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ಫೋಟದಿಂದ ಸಾರಗಾರ್ಹಿ ಸಾರಾಯಿ ಪ್ರದೇಶ ಮತ್ತು ಅಮೃತಸರ ಸನಿಹದ ರೆಸ್ಟೋರೆಂಟ್‌ಗಳ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಜನನಿಬಿಡ ಹೆರಿಟೇಜ್‌ ಸ್ಟ್ರೀಟ್‌ನಲ್ಲಿ ಪಾದಚಾರಿಗಳು ಗಾಯಗೊಂಡಿದ್ದಾರೆ.

“ಸ್ಫೋಟಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ. ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು ಸ್ಫೋಟದ ಮಾದರಿ ಸಂಗ್ರಹಿಸಿದ್ದಾರೆ. ಹೆರಿಟೇಜ್ ಸ್ಟ್ರೀಟ್‌ನ ಕಟ್ಟಡಗಳಿಗೆ ಹಾನಿಯಾಗಿಲ್ಲ. ಯಾವುದೇ ಸಾವು ಸಂಭವಿಸಿಲ್ಲ” ಎಂದು ಅಮೃತಸರ ಹೆಚ್ಚುವರಿ ಉಪ ಪೊಲೀಸ್‌ ಆಯುಕ್ತ ಡಾ ಮೆಹ್ತಾಬ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಲಾವಲ್ ಭುಟ್ಟೊ ಭಯೋತ್ಪಾದಕ ಉದ್ಯಮದ ವಕ್ತಾರ: ಜೈಶಂಕರ್ ಟೀಕೆ

“ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೊಲೀಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯಾರೂ ಭೀತಿಗೊಳ್ಳುವ ಅಗತ್ಯವಿಲ್ಲ” ಎಂದು ಪೊಲೀಸ್‌ ಆಯುಕ್ತರ ಕಚೇರಿ ಟ್ವೀಟ್‌ ಮಾಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...