ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

Date:

  • ನಿರ್ಣಯ ಮಂಡಿಸಿದ ತಮಿಳುವಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌
  • ಮೀಸಲಾತಿ ತಿದ್ದುಪಡಿಗೆ ಕಳೆದ ವರ್ಷ ಕೇಂದ್ರವನ್ನು ಒತ್ತಾಯಿಸಿದ್ದ ಸರ್ಕಾರ

ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, “ಭಾರತೀಯ ಸಂವಿಧಾನದಡಿ ಪರಿಶಿಷ್ಟ ಜಾತಿಗೆ ಸೇರಿದ ಜನರಿಗೆ ನೀಡಲಾಗುವ ಮೀಸಲಾತಿಯನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಈಗ ನಿರ್ಣಯ ಅಂಗೀಕರಿಸುವ ಮೂಲಕ ಎಲ್ಲ ರೀತಿಯಿಂದಲೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರಿಗೆ ಸಾಮಾಜಿಕ ನ್ಯಾಯದ ಪ್ರಯೋಜನಗಳನ್ನು ಪಡೆಯಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜನಸಂಖ್ಯೆಯಲ್ಲಿ ಚೀನಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಭಾರತ

ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮ ಸ್ವೀಕರಿಸಿದ ದಲಿತ ಸಮುದಾಯದವರಿಗೆ ಮೀಸಲಾತಿ ಪ್ರಯೋಜನ ವಿಸ್ತರಿಸುವ ಕುರಿತಂತೆ ಕೇಂದ್ರ ಸರ್ಕಾರದ ವಿರೋಧದ ನಡುವೆಯೇ ತಮಿಳುನಾಡು ಸರ್ಕಾರ ಈ ನಿರ್ಣಯ ಕೈಗೊಂಡಿದೆ.

ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೂ ಮೀಸಲಾತಿ ನೀಡಬೇಕು ಎಂದು ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ನೇತೃತ್ವದ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಆಯೋಗ ಮಾಡಿರುವ ಶಿಫಾರಸುಗಳನ್ನು ಜಾರಿಗೆ ತರಲು ಸಿದ್ಧವಿಲ್ಲ ಎಂದು ಕೇಂದ್ರ ಸರ್ಕಾರ 2022ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿ ಪರಿಶೀಲನೆ ನಡೆಸಲು ಕೇಂದ್ರವು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ನೇತೃತ್ವದಲ್ಲಿ ಸಮಿತಿಯನ್ನೂ ರಚಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...