ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

Date:

  • ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲು
  • ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವ

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು ಭಾನುವಾರ (ಏಪ್ರಿಲ್‌ 30) ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಮತ್ತು ಶಾಸಕ ಸುರೇಂದ್ರ ಸಿಂಗ್‌ ಅವರು ನೀಡಿದ ದೂರಿನ ಆಧಾರದಲ್ಲಿ ರಾಜಸ್ಥಾನದ ಪೊಲೀಸರು ಗಜೇಂದ್ರ ಅವರ ವಿರುದ್ಧ ಚಿತ್ತೋಗಢ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಗಜೇಂದ್ರ ಶೇಖಾವತ್‌ ಅವರು ರಾಜಸ್ಥಾನ ರಾಜಕೀಯ ಹದಗೆಟ್ಟಿದೆ. ಇಲ್ಲಿಯದು ರಾವಣನ ರಾಜಕೀಯ” ಎಂದು ಹೇಳಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುರೇಂದ್ರ ಸಿಂಗ್‌ ಅವರು ರಾಜಸ್ಥಾನ ಪರಂಪರೆ ಸಂರಕ್ಷಣೆ ಮತ್ತು ಉತ್ತೇಜನ ಪ್ರಾಧಿಕಾರದ ಅಧ್ಯಕ್ಷರು. “ಗೇಜೇಂದ್ರ ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ಘಾಸಿಯಾಗಿದೆ” ಎಂದು ದೂರಿನಲ್ಲಿ ಹೇಳಿದ್ದಾರೆ.

ಚಿತ್ತೋರ್‌ಗಢದಲ್ಲಿ ಏಪ್ರಿಲ್‌ 27ರಂದು ಬಿಜೆಪಿಯ ‘ಜನ ಆಕ್ರೋಶ’ ಸಮಾರಂಭದಲ್ಲಿ ಮಾತನಾಡಿದ್ದ ಗಜೇಂದ್ರ ಅವರು, “ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ರಾವಣನ ರಾಜಕೀಯ ಮಾಡುತ್ತಿದ್ದಾರೆ. ನೀವು ರಾಮರಾಜ್ಯವಾಗಿ ಮಾಡಬೇಕು” ಎಂದು ಹೇಳಿದ್ದರು.

ಗಜೇಂದ್ರ ಅವರ ಹೇಳಿಕೆ ಖಂಡಿಸಿ ಅವರ ವಿರುದ್ಧ ಕಾಂಗ್ರೆಸ್‌ ನಾಯಕ ಸುರೇಂದ್ರ ಸಿಂಗ್‌ ದೂರು ನೀಡಿದ್ದರು. “ಮುಖ್ಯಮಂತ್ರಿ ವಿರುದ್ಧ ಇಂತಹ ಅವಹೇಳನಕಾರಿ ಭಾಷೆ ಬಳಸಿದ ಗಜೇಂದ್ರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ. ಅವರು ಸಮಾವೇಶದಲ್ಲಿ ಮಾತನಾಡುವಾಗ ಧಾರ್ಮಿಕ ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಸುರೇಂದ್ರ ಸಿಂಗ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ; ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಗಜೇಂದ್ರ ಅವರು ಜೋಧಪುರದಲ್ಲಿ ಬಿಜೆಪಿ ಸಂಸದರು. ಈ ಹಿಂದೆ ಅಶೋಕ್ ಗೆಹ್ಲೋಟ್ ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದರು. 2019ರ ಲೋಕಸಭೆ ಚುನಾವಣೆ ವೇಳೆ ಗೆಹ್ಲೋಟ್ ಅವರ ಪುತ್ರ ವೈಭವ್ ವಿರುದ್ಧ ಜಯಿಸಿ ಎರಡನೇ ಅವಧಿಗೆ ಸಂಸದರಾಗಿದ್ದಾರೆ.

ಗಜೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 500 (ಮಾನಹಾನಿ) ಸೇರಿದಂತೆ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ: ಡಿ.ಕೆ. ಸುರೇಶ್ ಆಕ್ರೋಶ

"ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...