2 ಸಾವಿರ ನೋಟು ಹಿಂತೆಗೆತ : ಮೋದಿಯ ತುಘಲಕ್ ದರ್ಬಾರ್ ಎಂದ ಜೈರಾಮ್‌ ರಮೇಶ್

Date:

  • ಟ್ವೀಟ್‌ ಮೂಲಕ ಜೈರಾಮ್‌ ರಮೇಶ್‌ ಟೀಕೆ
  • 2016ರಲ್ಲಿ ₹2000 ಮುಖಬೆಲೆಯ ನೋಟು ಪರಿಚಯ

₹2000 ಮುಖಬೆಲೆಯ ನೋಟು ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಕ್ರಮವನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಟೀಕಿಸಿದ್ದಾರೆ.

₹2000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದೆ. ಆದರೆ ಈ ನೋಟುಗಳು ಕಾನೂನಾತ್ಮಕವಾಗಿ ಮಾನ್ಯತೆ ಹೊಂದಿರುತ್ತವೆ ಎಂದು ಆರ್‌ಬಿಐ ಹೇಳಿದೆ.

ಈ ಬೆನ್ನಲ್ಲೇ, ಕೇಂದ್ರ ಸರ್ಕಾರವನ್ನು ಟೀಕಿಸಿರುವ ಜೈರಾಮ್‌ ರಮೇಶ್‌, “ಬ್ಯಾಂಕ್‌ನ ಈ ಕ್ರಮವು, ಮೊದಲು ಕಾರ್ಯನಿರ್ವಹಿಸಿ ನಂತರ ಯೋಚಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಶಿಷ್ಟ್ಯವೆಂದು ತೋರಿಸುತ್ತದೆ” ಎಂದು ರಮೇಶ್‌ ಲೇವಡಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕುಟುಕಿದ್ದಾರೆ.

ಜೈರಾಮ್‌ ರಮೇಶ್‌ ಅವರಂತೆ ಕಾಂಗ್ರೆಸ್‌ನ ಇತರ ನಾಯಕರೂ ₹2000 ಮುಖಬೆಲೆಯ ನೋಟು ಹಿಂಪಡೆಯುವಿಕೆಯನ್ನು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

“₹2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು ₹2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...