ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಬಿಜೆಪಿಯ ಮಾಜಿ ಶಾಸಕ ಬಂಧನ

Date:

Advertisements

ಮಣಿಪುರದ ಇಂಫಾಲ್‌ನಲ್ಲಿ ಪುನಃ  ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್‌ ತಿಳಿಸಿದ್ದಾರೆ.

ಹದಿನೈದು ದಿನಗಳ ಹಿಂದೆ ಕನಿಷ್ಠ 71 ಜನರು ಸಾವನ್ನಪ್ಪಿದ ಮತ್ತು 35,000 ಜನರು ಸ್ಥಳಾಂತರಗೊಂಡ ಕಲಹ ಪೀಡಿತ ರಾಜ್ಯದಲ್ಲಿ ಮತ್ತೊಮ್ಮೆ ಹಿಂಸಾಚಾರಕ್ಕೆ ಪ್ರಚೋದಿಸುವ ಪಿತೂರಿಯ ಹಿಂದೆ ಮಾಜಿ ಶಾಸಕನ ಕೈವಾಡವಿದೆ. ಬಂಧಿತ ಶಾಸಕ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು ಎಂದು ಮಣಿಪುರ ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಂಫಾಲ್‌ನ ನ್ಯೂ ಚೆಕ್ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊಸ ಹಿಂಸಾಚಾರವು ನಡೆದಿದೆ. ಈ ಪ್ರದೇಶದಲ್ಲಿ ಕುಕಿಗಳು, ಮೀತೀಗಳು ಮತ್ತು ಇತರ ಜನಾಂಗೀಯ ಗುಂಪುಗಳು ನೆಲೆಸಿದ್ದಾರೆ.

Advertisements

ಸೋಮವಾರ ಬೆಳಗ್ಗೆ, ಕರ್ಫ್ಯೂ ಸಡಿಲಗೊಂಡಿದ್ದರಿಂದ, ಮಾಜಿ ಶಾಸಕರ ನೇತೃತ್ವದ ತಂಡ ಬಂದೂಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದು ವ್ಯಾಪಾರಸ್ಥರಿಗೆ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಹೇಳಿದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದರು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬಂಗಾಳದಲ್ಲಿ ಕುಸಿಯುತ್ತಿರುವ ಮಮತಾ ಅಲೆಯ ನಡುವೆ ಎಡಪಕ್ಷ-ಕಾಂಗ್ರೆಸ್‌ ಮೈತ್ರಿ ಕಸರತ್ತು

”ಕೆಲವು ಕಡೆಗಳಲ್ಲಿ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದ ಹಿಂಸಾಚಾರ ಅಥವಾ ಜೀವಹಾನಿಯಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಒಂದುವೇಳೆ ಅಹಿತಕರ ಘಟನೆಗಳು ನಡೆದರೆ, ಈ ಸ್ಥಳಗಳಿಗೆ ತಲುಪಿ, ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುತ್ತೇವೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೈನಿಕರನ್ನು ನಿಯೋಜಿಸಲಾಗಿದೆ. ಭದ್ರತಾ ಪಡೆಗಳು ಮಾನವ ರಹಿತ ವೈಮಾನಿಕ ವಾಹನಗಳು ಮತ್ತು ಚೀತಾ ಹೆಲಿಕಾಪ್ಟರ್‌ಗಳ ಮೂಲಕ ಸ್ಥಳದಲ್ಲಿ ವೈಮಾನಿಕ ಕಣ್ಗಾವಲು ನಡೆಸುತ್ತಿವೆ. ರಾಜ್ಯದ ಒಳಗೆ ಮತ್ತು ಹೊರಗೆ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷವನ್ನು ಪ್ರಚೋದಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಎಫ್‌ಐಆರ್‌ಗಳನ್ನು ದಾಖಲಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ, ಮಣಿಪುರ ಗೃಹ ಇಲಾಖೆಯು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣಕ್ಕಾಗಿ ಬಳಸಬಹುದೆಂಬ ಆತಂಕವನ್ನು ಉಲ್ಲೇಖಿಸಿ, ಇಂಟರ್‌ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮೇ 26 ರವರೆಗೆ ವಿಸ್ತರಿಸಿದೆ.

ಸೋಮವಾರ ನಡೆದ ಘಟನೆಯಿಂದ ಕರ್ಫ್ಯೂ ಸಡಿಲಿಕೆಯ ಸಮಯವನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 2ಕ್ಕೆ ರಾಜ್ಯ ಸರ್ಕಾರವು ಇಳಿಸಿದೆ. ಮೊದಲು ವಿಶ್ರಾಂತಿ ಅವಧಿಯು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ಸಡಿಲಿಸಲಾಗಿತ್ತು.

ಕಳೆದ 10 ದಿನಗಳಲ್ಲಿ ಮಣಿಪುರದಲ್ಲಿ ಪರಿಸ್ಥಿತಿ ಹೆಚ್ಚಾಗಿ ಶಾಂತಿಯುತವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಸಾರ್ವಜನಿಕರು ಶಾಂತವಾಗಿರಲು ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X