ಸೇನಾ ಠಾಣೆ ಮೇಲೆ ದಾಳಿ; ನಾಲ್ವರು ಯೋಧರು ಹುತಾತ್ಮ

Date:

  • ಪಂಜಾಬ್‌ನ ಸೇನಾ ಠಾಣೆಯ ಮೇಲೆ ಉಗ್ರರ ದಾಳಿ
  • ಖಲಿಸ್ತಾನಿ ಉಗ್ರ ತಂಡದಿಂದ ದಾಳಿಯ ಸಂಶಯ

ಪಂಜಾಬ್​ನ ಭಟಿಂಡಾದ ಸೇನಾ ಠಾಣೆ ಮೇಲೆ ಬುಧವಾರ ಬೆಳಗಿನ ಜಾವ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

“ಬಟಿಂಡಾ ಮಿಲಿಟರಿ ಠಾಣೆ ಗುರಿಯಾಗಿಸಿ ಬೆಳಗ್ಗೆ 4.35ರ ಸುಮಾರಿಗೆ ಠಾಣೆಯ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ. ಈ ವೇಳೆ ಠಾಣೆಯಲ್ಲಿದ್ದ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಘಟನಾ ಪ್ರದೇಶವನ್ನು ಸುತ್ತುವರಿಯಲಾಗಿದೆ.  ಸಾರ್ವಜನಿಕರ ಚಲನವಲನವನ್ನು ನಿರ್ಬಂಧಿಸಲಾಗಿದೆ. ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ” ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ಧೀರಾ?: ಜೈಲಿಗೆ ತಳ್ಳಿದರೂ ಜನರ ಪರವಾಗಿ ಹೋರಾಟ; ವಯನಾಡಿನಲ್ಲಿ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಖಲಿಸ್ತಾನಿ ಹೋರಾಟಗಾರ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನ ಅನುಯಾಯಿಗಳು ಸಭೆಯೊಂದನ್ನು ನಡೆಸಲು ಸಿದ್ಧತೆ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದು ವೈರಲ್​ ಆಗಿದೆ. ಹೀಗಾಗಿ ಕೃತ್ಯದ ಹಿಂದೆ ಖಲಿಸ್ತಾನಿ ಹೋರಾಟಗಾರರು ಇರುವ ಶಂಕೆಯೂ ವ್ಯಕ್ತವಾಗಿದೆ.

ಸಿಂಗ್​ನ ಆಪ್ತ ಪಾಪಲ್‌ಪ್ರೀತ್‌ಸಿಂಗ್​ನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಮೃತ್​ಪಾಲ್​ ಬಂಧನಕ್ಕೆ ಪಂಜಾಬ್​ ಪೋಲಿಸರು ತೀವ್ರ ಹುಡುಕಾಟದಲ್ಲಿದ್ದಾರೆ. 

ಕಳೆದ ಕೆಲ ವಾರಗಳಲ್ಲಿ ಅಮೃತ್‌ಪಾಲ್ ಪಂಜಾಬ್‌ನ ವಿವಿಧೆಡೆ ಕಂಡುಬಂದಿದ್ದರೂ, ಪೊಲೀಸರ ಬಲೆಗೆ ಬಿದ್ದಿಲ್ಲ.

ಈ ನಡುವೆಯೇ  ಸೇನಾ ಠಾಣೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಅದಾಗಿಯೂ ಇದು ಭಯೋತ್ಪಾದಕ ದಾಳಿಯಲ್ಲ ಎಂದು ಬಟಿಂಡಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಗುಲ್ನೀತ್ ಸಿಂಗ್ ಖುರಾನಾ, ಸ್ಪಷ್ಟಪಡಿಸಿದ್ದಾರೆ.

“ಇದು ಭಯೋತ್ಪಾದಕ ಕೃತ್ಯವಲ್ಲ. ಹೊರಗಿನಿಂದ ಆಗಿರುವ ದಾಳಿಯೂ ಅಲ್ಲ. ಸಂಘಟನೆಯೊಂದು ನಡೆಸಿರುವ ಕೃತ್ಯವೆಂದು ಅನುಮಾನಿಸಲಾಗಿದೆ” ಎಂದು ಪಂಜಾಬ್‌ನ ಹೆಚ್ಚುವರಿ ಡಿಜಿಪಿ ಎಸ್‌ಪಿಎಸ್ ಪಾರ್ಮರ್ ಹೇಳಿದ್ದಾರೆ.

ಮೂಲಗಳ ಪ್ರಕಾರ, ಸೇನಾ ತುಕಡಿಯ ಕಚೇರಿಯ ಮೆಸ್ ಬಳಿ ಗುಂಡಿನ ದಾಳಿ ನಡೆದಿದೆ. ಕೆಲ ದಿನಗಳಿಂದ ಐಎಸ್‌ಎಸ್‌ಎಎಸ್ ರೈಫಲ್ ಮತ್ತು 28 ಸುತ್ತುಗಳ ಗುಂಡುಗಳೂ ಈ ಶಾಖೆಯಿಂದ ಕಣ್ಮತೆಯಾಗಿತ್ತು.

ಹೀಗಾಗಿ ಆರಂಭಿಕ ವರದಿಗಳ ಪ್ರಕಾರ ಶಾಖೆಯ ಒಳಗಿನ ಭಿನ್ನಾಭಿಪ್ರಾಯಗಳಿಂದ ದಾಳಿಯಾಗಿರುವ ಸಾಧ್ಯತೆಯಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...