ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

Date:

Advertisements

ಇಸ್ರೋ ಇಂದು (ಅಕ್ಟೋಬರ್ 21)ರ ಬೆಳಗ್ಗೆ 10.0 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಮಾನವಸಹಿತ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ.

ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ಎರಡೂ ಮಾಡೆಲ್​ಗಳನ್ನು ಹೊತ್ತು ರಾಕೆಟ್​​​​​ ಸಾಗಿದ್ದು ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿಸಲಾಯಿತು. ನಂತರ ನೌಕೆಯು ಬಂಗಾಳ ಕೊಲ್ಲಿಯ ಸಮುದ್ರಕ್ಕೆ ಯಶಸ್ವಿಯಾಗಿ ಇಳಿಯಿತು.

“ಯೋಜನೆಯ ಯಶಸ್ಸನ್ನು ಘೋಷಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಸಿಬ್ಬಂದಿ ತಪ್ಪಿಸಿಕೊಳ್ಳುವ ವ್ಯವಸ್ಥೆಯನ್ನು ಪ್ರದರ್ಶಿಸುವುದು ಕಾರ್ಯಾಚರಣೆಯ ಉದ್ದೇಶವಾಗಿತ್ತು” ಎಂದು ಇಸ್ರೋ ಅಧ್ಯಕ್ಷ ಸೋಮನಾಥನ್‌ ತಿಳಿಸಿದ್ದಾರೆ.

Advertisements

ಗಗನಯಾನವನ್ನು ಬೆಳಿಗ್ಗೆ 8.45ಕ್ಕೆ ಉಡಾವಣೆಗೊಳಿಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಉಡಾವಣೆಗೂ 5 ಸೆಕೆಂಡ್‌ ಮೊದಲು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಂತರ ತಾಂತ್ರಿಕ ಸಮಸ್ಯೆಗಳನ್ನು ಪತ್ತೆಹಚ್ಚಿ ದೋಷಗಳನ್ನು ಸರಿಪಡಿಸಲಾಗಿತ್ತು.  ಹವಾಮಾನ ವೈಪರಿತ್ಯದಿಂದ ಸಮಯವನ್ನು 10 ಗಂಟೆಗೆ ಬದಲಾವಣೆ ಮಾಡಲಾಗಿತ್ತು.

ಮೂರು ದಿನಗಳ ಕಾಲ 400 ಕಿಲೋಮೀಟರ್‌ಗಳಷ್ಟು ದೂರಕ್ಕೆ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವುದು ಗಗನಯಾನ ನೌಕೆಯ ಉದ್ದೇಶವಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

ಚಂದ್ರಯಾನ–3 ಯೋಜನೆಯ ಸಂದರ್ಭದಲ್ಲೂ ಇಸ್ರೋ ಇಂಥದ್ದೊಂದು ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿತ್ತು. ಅದು ಇಸ್ರೊಗೆ ಯಶಸ್ಸು ತಂದುಕೊಟ್ಟಿತ್ತು. ಇದರ ಫಲವಾಗಿ ವಿಕ್ರಂ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ದಕ್ಷಿಣ ಧ್ರುವದ ಸಮೀಪ ಇಳಿಯಲು ಸಾಧ್ಯವಾಗಿತ್ತು. ಹೀಗಾಗಿ ಗಗನಯಾನ ಯೋಜನೆಯಲ್ಲಿ ಗಗನಯಾತ್ರಿಗಳ ಸುರಕ್ಷತೆಗಾಗಿ ಈ ಪ್ರಯೋಗ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X