ಉತ್ತರ ಪ್ರದೇಶದಲ್ಲಿ ಮತ್ತೆ ಶೂಟೌಟ್: ಕೋರ್ಟ್‌ ಆವರಣದಲ್ಲಿ ವಕೀಲನ ವೇಷದಲ್ಲಿ ಬಂದು ಹಂತಕನ ಹತ್ಯೆ

Date:

ಉತ್ತರ ಪ್ರದೇಶದಲ್ಲಿ ಪುನಃ ಗುಂಡಿನ ಶಬ್ದ ಅಬ್ಬರಿಸಿದೆ. ಲಖನೌ ನಗರದ ಸಿವಿಲ್ ಕೋರ್ಟ್ ಆವರಣದಲ್ಲಿ ಕುಖ್ಯಾತ ದರೋಡೆಕೋರ, ಹಲವು ಕೊಲೆಗಳ ಆರೋಪಿ ಸಂಜೀವ್ ಮಹೇಶ್ವರಿ ಅಲಿಯಾಸ್ ‘ಜೀವಾ’ ಎಂಬಾತನನ್ನು ಬುಧವಾರ(ಜೂನ್ 7) ವಕೀಲರ ವೇಷದಲ್ಲಿ ಬಂದಿದ್ದ ಹಂತಕ ಹಾಡ ಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಮುಜಾಫರ್‌ ನಗರ ಮೂಲದ ಜೀವಾನನ್ನು 2006 ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ ರಾಯ್ ಮತ್ತು ಮಾಜಿ ಸಚಿವ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ದ್ವಿವೇದಿ ಹತ್ಯೆ ಪ್ರಕರಣದಲ್ಲಿ ಇವರಿಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಜೀವಾ ಇತರ ನಾಲ್ಕು ಕೊಲೆಗಳಲ್ಲಿಯೂ ನಂಟು ಹೊಂದಿದ್ದ. ದಾಳಿಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.  

ಈ ಸುದ್ದಿ ಓದಿದ್ದೀರಾ? ಅದಾನಿ ಪವರ್‌ನಿಂದ ವಿದ್ಯುತ್‌ ಖರೀದಿಸಿದ ನಂತರ ಗುಜರಾತ್‌ನಲ್ಲಿ ಶೇ.102ರಷ್ಟು ವಿದ್ಯುತ್‌ ದರ ಏರಿಕೆ

ಕೃಷ್ಣಾನಂದ ರಾಯ್ ಪ್ರಕರಣದಲ್ಲಿ ಜೀವಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯಲಾಗಿತ್ತು. ವಕೀಲರ ವೇಷದಲ್ಲಿದ್ದ ಹಂತಕ ಆರು ಸುತ್ತು ಗುಂಡು ಹಾರಿಸಿದ್ದಾನೆ. ‘ಜೀವಾ’ ವಿರುದ್ಧ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈತ ಮುಖ್ತಾರ್ ಅನ್ಸಾರಿಗೆ ಆಪ್ತನಾಗಿದ್ದ ಎನ್ನಲಾಗಿದೆ.  

ಘಟನೆಯ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಆಕ್ರೋಶ ಹೊರ ಹಾಕಿದ್ದು, ಲಖನೌ ಅತ್ಯಂತ “ಅಸುರಕ್ಷಿತ ನಗರ”ಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ನಗರವು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತವಾಗಿದೆ. ಲಖನೌದಲ್ಲಿ ಹೆಚ್ಚುತ್ತಿರುವ ಅಪರಾಧಗಳಿಗೆ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಇಬ್ಬರು ಹೊಣೆಗಾರರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಸಮಾಜವಾದಿ ಪಕ್ಷದ ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಆತನ ಸೋದರನನ್ನು ಪತ್ರಕರ್ತರ ವೇಷದಲ್ಲಿ ಆಗಮಿಸಿದ್ದ ಹಂತಕರು ಹತ್ಯೆ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ ಪೆರಿಯಾರ್...

ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ...

ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

ಯುಪಿಎ ಸರ್ಕಾರ 2010ರಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ...

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಎಬ್ಬಿಸಿದ ‘ಭಯೋತ್ಪಾದಕ’ ಹೇಳಿಕೆ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಭಯೋತ್ಪಾದಕ ಎಂದು ಕರೆದಿದ್ದ ರಮೇಶ್...