ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ಕೇಳಿದ್ದಕ್ಕೆ ಗುಜರಾತ್‌ ಹೈ ನ್ಯಾಯಾಧೀಶರು `ಮನುಸ್ಮೃತಿ ಓದಿ’ ಎಂದರು!

Date:

Advertisements

ಅಪ್ರಾಪ್ತೆ ಮೇಲೆ ಅತ್ಯಾಚಾರವಾಗಿ 7 ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತ ಮಾಡಬಹುದೇ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯ ಕೇಳಿದಾಗ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮನುಸ್ಮೃತಿ ಓದುವಂತೆ ಹೇಳಿಕೆ ನೀಡಿದ್ದಾರೆ.

“ನಾವು 21 ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ ಮದುವೆಯಾಗಲು ಗರಿಷ್ಠ ವಯಸ್ಸು 14-15. ಒಂದಷ್ಟು ವರ್ಷಗಳ ಹಿಂದೆ ಹೆಣ್ಣುಮಕ್ಕಳು 14-15ನೇ ವಯಸ್ಸಿಗೆ ಮದುವೆಯಾಗುತ್ತಿದ್ದರು, 17ನೇ ವಯಸ್ಸಿಗೆ ಮಗುವಿಗೆ ಜನ್ಮ ನೀಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಹುಡುಗರಿಗಿಂತ ಹುಡುಗಿಯರೇ ಪ್ರಬುದ್ಧರಾಗುತ್ತಿದ್ದಾರೆ. ನೀವು ಒಮ್ಮೆ ಮನುಸ್ಮೃತಿ ಓದಿ” ಎಂದು ನ್ಯಾಯಮೂರ್ತಿ ಸಮೀರ್ ಜೆ ದವೆ ಹೇಳಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ತಂದೆಯ ವಕೀಲರು ಈ ಪ್ರಕರಣದಲ್ಲಿ ಬಾಲಕಿಗೆ ಇನ್ನೂ ಚಿಕ್ಕ ವಯಸ್ಸು ಈ ದೃಷ್ಟಿಯಿಂದ ಗರ್ಭಪಾತಕ್ಕೆ ಅನುಮತಿ ನೀಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Advertisements

ಭ್ರೂಣವು 7 ತಿಂಗಳಿಗಿಂತ ಹೆಚ್ಚು ವಯಸ್ಸಾಗಿರುವ ಕಾರಣ ಗರ್ಭಪಾತ ಮಾಡಬಹುದೇ ಎಂದು ಈ ವಿಷಯದಲ್ಲಿ ವೈದ್ಯರನ್ನೂ ಸಂಪರ್ಕಿಸಿದ್ದೇವೆ ಎಂದು ಹೈಕೋರ್ಟ್ ಹೇಳಿದೆ. ಅಪ್ರಾಪ್ತ ಮತ್ತು ಭ್ರೂಣ ಇಬ್ಬರ ಜೀವಕ್ಕೂ ಅಪಾಯವಿದ್ದಲ್ಲಿ ಗರ್ಭಪಾತಕ್ಕೆ ಅವಕಾಶ ನೀಡುವಂತಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಕೇರಳ ಪ್ರವೇಶಿಸಿದ ಮುಂಗಾರು; ಕೃಷಿ ಚಟುವಟಿಕೆಗಳು ಆರಂಭ

ರಾಜ್‌ಕೋಟ್‌ನ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ತುರ್ತು ಆಧಾರದ ಮೇಲೆ ವೈದ್ಯರ ಸಮಿತಿಯ ಮೂಲಕ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸುವಂತೆ ನ್ಯಾಯಾಲಯವು ಆದೇಶವನ್ನು ನೀಡಿದೆ. ವೈದ್ಯರು ವರದಿ ನೀಡಿದ ಬಳಿಕವಷ್ಟೇ ಗುಜರಾತ್ ಹೈಕೋರ್ಟ್ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ಮುಂದಿನ ವಿಚಾರಣೆ ಜೂನ್ 15 ರಂದು ನಡೆಯಲಿದೆ.

ಅಪ್ರಾಪ್ತ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆಗೆ 7 ತಿಂಗಳ ನಂತರ ಆಕೆ ಗರ್ಭಿಣಿಯಾಗಿರುವ ವಿಷಯ ತಿಳಿಯಿತು. ಇದಾದ ಬಳಿಕ ಗುಜರಾತ್ ಹೈಕೋರ್ಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಭಾರತದಲ್ಲಿ, ಕೆಲವು ಸಂದರ್ಭಗಳಲ್ಲಿ 20 ವಾರಗಳವರೆಗೆ ಗರ್ಭಪಾತಕ್ಕೆ ಅವಕಾಶ ನೀಡಲಾಗಿತ್ತು, ಆದರೆ 2021 ರಲ್ಲಿ ಈ ಕಾನೂನಿನ ತಿದ್ದುಪಡಿಯ ನಂತರ, ಸಮಯದ ಮಿತಿಯನ್ನು 24 ವಾರಗಳಿಗೆ ಹೆಚ್ಚಿಸಲಾಯಿತು. ಆದರೂ, ಕೆಲವು ವಿಶೇಷ ಪ್ರಕರಣಗಳಲ್ಲಿ, 24 ವಾರಗಳ ನಂತರವೂ ಗರ್ಭಪಾತಕ್ಕೆ ನ್ಯಾಯಾಲಯದಿಂದ ಅನುಮತಿ ತೆಗೆದುಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X