ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನೀಡಬೇಕಾಗಿಲ್ಲ ಎಂದ ಗುಜರಾತ್ ಹೈಕೋರ್ಟ್; ಕೇಜ್ರಿವಾಲ್‌ಗೆ ₹25 ಸಾವಿರ ದಂಡ

Date:

  • ಮುಖ್ಯ ಮಾಹಿತಿ ಆಯೋಗದ  ಆದೇಶ ರದ್ದುಗೊಳಿಸಿರು ಹೈಕೋರ್ಟ್
  • ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಒದಗಿಸಲು ನಿರ್ದೇಶನ ನೀಡಿದ್ದ ಸಿಐಸಿ

ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಏಕಸದಸ್ಯ ಪೀಠವು ಮುಖ್ಯ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿದೆ. ಜೊತೆಗೆ ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ₹25 ಸಾವಿರ ದಂಡ ವಿಧಿಸಿದೆ.

ಪ್ರಧಾನ ಮಂತ್ರಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ), ಗುಜರಾತ್ ವಿಶ್ವವಿದ್ಯಾಲಯ ಹಾಗೂ ದೆಹಲಿ ವಿಶ್ವವಿದ್ಯಾಲಯದ ಪಿಐಒಗಳಿಗೆ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಒದಗಿಸುವಂತೆ ಆಯೋಗ ನಿರ್ದೇಶಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಧಾನಿ ನರೇಂದ್ರ ಮೋದಿ ಅವರ ಸ್ನಾತಕೋತ್ತರ ಪದವಿಗೆ ಸಂಬಂಧಿಸಿ ಕೇಂದ್ರ ಮಾಹಿತಿ ಆಯೋಗದ ಈ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ತಂದೆಗೆ ಪೊಲೀಸರಿಂದ ಕಿರುಕುಳ; ಮಹಾರಾಷ್ಟ್ರ ಸಿಎಂಗೆ ಪತ್ರ

ಪ್ರಧಾನಿ ಮೋದಿ ಅವರ ಎಂಎ ಪದವಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಒದಗಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನಿರ್ದೇಶನ ನೀಡಿತ್ತು. ಪ್ರಧಾನಿ ಅವರ ಪದವಿ ವಿವರವನ್ನು ಒದಗಿಸಲು ಆದೇಶಿಸುವಂತೆ ನವದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸಿಐಸಿಗೆ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರಿಗೆ ವಿಧಿಸಿರುವ ದಂಡವನ್ನು ಗುಜರಾತ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಈ ತೀರ್ಪಿಗೆ ತಡೆ ನೀಡಲು ಕೂಡ ನ್ಯಾಯಮೂರ್ತಿ ಬೈರನ್ ವೈಷ್ಣವ್ ಅವರ ಪೀಠ ನಿರಾಕರಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಮೋದಿ ಅವರ ಸ್ನಾತಕೋತ್ತರ ಪದವಿಯ ವಿವರಗಳನ್ನು ನೀಡುವಂತೆ 2016ರಲ್ಲಿ ಗುಜರಾತ್ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚನೆ ನೀಡಿತ್ತು.

ವಿಶ್ವವಿದ್ಯಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ, “ನೀವು ನಾಮನಿರ್ದೇಶನವನ್ನು (ಚುನಾವಣೆಯಲ್ಲಿ ಸಲ್ಲಿಸಿದ) ನೋಡಿದರೆ ಅದು ಅವರ ಶೈಕ್ಷಣಿಕ ಅರ್ಹತೆ ಉಲ್ಲೇಖಿಸುತ್ತದೆ. ಹೀಗಾಗಿ, ನಾವು ಪದವಿ ಪ್ರಮಾಣಪತ್ರ ಕೇಳುತ್ತಿದ್ದೇವೆ, ವಿನಾ ಅಂಕಪಟ್ಟಿ ಅಲ್ಲ” ಎಂದು ವಾದಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಅವರು 1978ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು 1983ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...