ರಾಜಕಾರಣದಲ್ಲಿ ಧರ್ಮ ಬಳಕೆ ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ: ಸುಪ್ರೀಂ ಕೋರ್ಟ್

Date:

  • ಜನರು ಏಕೆ ಈ ವಿಚಾರದಲ್ಲಿ ತಮ್ಮನ್ನು ತಾವು ನಿಗ್ರಹಿಸಿಕೊಳ್ಳಬಾರದು ಎಂದ ನ್ಯಾಯಪೀಠ
  • ಮಾಜಿ ಪ್ರಧಾನಿಗಳ ಸೌಹಾರ್ದಯುತ ಭಾಷಣಗಳ ಬಗ್ಗೆ ತಿಳಿಸಿದ ನ್ಯಾಯಾಲಯ

ರಾಜಕೀಯ ಮತ್ತು ಧರ್ಮಗಳನ್ನು ಬೇರ್ಪಡಿಸಿದರೆ ಮತ್ತು ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠವು, ದ್ವೇಷ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ವಿಫಲವಾಗಿರುವ ವಿವಿಧ ರಾಜ್ಯಗಳ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

“ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ, ದ್ವೇಷ ಕೊನೆಗೊಳ್ಳುತ್ತದೆ. ರಾಜಕಾರಣಿಗಳು ಧರ್ಮವನ್ನು ಬಳಸುವುದನ್ನು ನಿಲ್ಲಿಸಿದಾಗ, ಇದೆಲ್ಲವೂ ನಿಲ್ಲುತ್ತದೆ ”ಎಂದು ಪೀಠ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜನರು ಏಕೆ ಈ ವಿಚಾರದಲ್ಲಿ ತಮ್ಮನ್ನು ತಾವು ನಿಗ್ರಹಿಸಿಕೊಳ್ಳಬಾರದು. ರಾಜಕಾರಣಿಗಳು ಪ್ರತಿದಿನ ಇತರರನ್ನು ನಿಂದಿಸಲು ಟಿವಿ ಮತ್ತು ಸಾರ್ವಜನಿಕ ವೇದಿಕೆ ಸೇರಿದಂತೆ ಭಾಷಣಗಳನ್ನು ಮಾಡುತ್ತಿರುತ್ತಾರೆ. ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು” ಎಂದು ನ್ಯಾಯಪೀಠದ ನೇತೃತ್ವದ ವಹಿಸಿದ್ದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನೂ ಉಲ್ಲೇಖಿಸಿದ ನ್ಯಾಯಪೀಠ, ಇವರ ಭಾಷಣಗಳನ್ನು ಕೇಳಲು ಜನರು ದೂರದ ಊರುಗಳಿಂದ ಬರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೆಂಡಕಾರುವಂತಹ ಭಾಷಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿತು.

ಕೆಲವರು ದ್ವೇಷ ಭಾಷಣಗಳನ್ನು ಮಾಡುವ ಮೂಲಕ ಸಮಾಜದ ಶಾಂತಿ- ಸೌಹಾರ್ದತೆ ಕದಡಲು ಪ್ರಯತ್ನಿಸುತ್ತಿದ್ದಾರೆ. ಜನರು ಇಂಥವುಗಳಿಂದ ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ನ್ಯಾಯಪೀಠ ಹೇಳಿದೆ.

ಏತನ್ಮಧ್ಯೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿರ್ದಿಷ್ಟ ಸಮುದಾಯದ ವಿರುದ್ಧ ಕೇರಳದಲ್ಲಿ ಮಾಡಿದ ಅವಹೇಳನಕಾರಿ ಭಾಷಣವನ್ನು ಪ್ರಸ್ತಾಪಿಸಿದರು. ಅರ್ಜಿದಾರರಾದ ಶಾಹೀನ್‌ ಅಬ್ದುಲ್ಲಾ ದ್ವೇಷ ಭಾಷಣಗಳ ಆಯ್ದ ಘಟನೆಗಳನ್ನು ನ್ಯಾಯಾಲಯಕ್ಕೆ ತೋರಿಸಿದ್ದಾರೆ ಎಂದು ತಮ್ಮ ವಾದವನ್ನು ಮಂಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...