ಉತ್ತರ ಪ್ರದೇಶ | ಪೊಲೀಸ್‌ ಕಸ್ಟಡಿಯಲ್ಲಿ ವ್ಯಕ್ತಿ ಸಾವು; ರಸ್ತೆಯಲ್ಲಿ ಮೃತದೇಹವಿಟ್ಟು ಪ್ರತಿಭಟನೆ

Date:

ಜೂಜಾಟದಲ್ಲಿ ತೊಡಗಿದ್ದ ಎಂದು ಬಂಧಿಸಲಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲಿ ಸಾವಿಗೀಡಾದ್ದಾನೆ ಎಂಬ ಆರೋಪಿಸಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶ ಬಾಗ್‌ಪತ್ ಜಿಲ್ಲೆಯ ರತೌಲ್ ಪಟ್ಟಣದಲ್ಲಿ ನಡೆದಿದೆ.

- Advertisement -

28 ವರ್ಷದ ಮೊಹಮ್ಮದ್‌ ಸಾಜಿದ್ ಅಬ್ಬಾಸಿ ಎಂಬಾತನನ್ನು ಜೂಜಾಟದಲ್ಲಿ ತೊಡಗಿದ್ದ ಎನ್ನುವ ಆರೋಪದಲ್ಲಿ ರತೌಲ್ ಪಟ್ಟಣದ ಪೊಲೀಸರು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿಗೆ ಚಿತ್ರಹಿಂಸೆ ನೀಡಲಾಗಿದೆ. ಪೊಲೀಸರ ಹಲ್ಲೆಯಿಂದಲೇ ಸಾವೀಗೀಡಾಗಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ನನ್ನ ಮಗ ಜೂಜಾಟದಲ್ಲಿ ಭಾಗಿಯಾಗಿಲ್ಲ. ಆತ ಜೂಜಾಟದಲ್ಲಿ ತೊಡಗಿದ್ದವರನ್ನು ನೋಡುತ್ತಿದ್ದ. ಆದರೆ ಪೊಲೀಸರು ಆಗಮಿಸಿ ನನ್ನ ಮಗ ಸೇರಿದಂತೆ ಮೂವರನ್ನು ಕರೆದೊಯ್ದರು. ಪ್ರಾಥಮಿಕ ವಿಚಾರಣೆಯ ನಂತರ ಉಳಿದ ಇಬ್ಬರನ್ನು ಬಿಡುಗಡೆಗೊಳಿಸಲಾಯಿತು. ಆದರೆ ನನ್ನ ಮಗನನ್ನು ಬಿಡುಗಡೆ ಮಾಡದೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ಚಿತ್ರಹಿಂಸೆಯಿಂದಲೇ ಆತ ಸಾವೀಗೀಡಾಗಿದ್ದಾನೆ” ಎಂದು ಮೃತಪಟ್ಟ ಮೊಹಮ್ಮದ್‌ ತಂದೆ ಸಾಜಿದ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶರದ್ ಪವಾರ್ ಅವರನ್ನು ಬಗ್ಗಿಸುವುದು ಅಷ್ಟು ಸುಲಭವಲ್ಲ. ಇದನ್ನು Heroically ಹೇಳುತ್ತಿಲ್ಲ

“ನಮಗೆ ಕುಟುಂಬದಿಂದ ಇನ್ನೂ ಯಾವುದೇ ದೂರು ಬಂದಿಲ್ಲ. ಆತ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಹೇಳುತ್ತಿದ್ದಾರೆ. ನಾವು ದೂರು ಸ್ವೀಕರಿಸಿದ ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತೇವೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಕುಟುಂಬದವರು ದೂರು ನೀಡಿದ ನಂತರ ಅದರಂತೆ ಕ್ರಮ ಕೈಗೊಳ್ಳುತ್ತೇವೆ. ನಾನು ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದೇನೆ. ಅವರು ಕಾನೂನಿನ ಪ್ರಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಉತ್ತರ ಪ್ರದೇಶ ಬಾಗ್ಪತ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯಾ ತಿಳಿಸಿದ್ದಾರೆ.

“ಸಾಜಿದ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆಯ ನಂತರ ಬಿಡುಗಡೆ ಮಾಡಿದ್ದಾರೆ. ಆತ ತಮ್ಮ ಕುಟುಂಬ ಸದಸ್ಯರೊಂದಿಗೆ ಆರೋಗ್ಯವಾಗಿ ಹೋಗಿದ್ದ ಮತ್ತು ಮನೆಯಲ್ಲಿ ಸಾವನ್ನಪ್ಪಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗಿದೆ ”ಎಂದು ಪೊಲೀಸರು ತಿಳಿಸಿದ್ದಾರೆ.

“ಇಲ್ಲಿ ಆಟವಾಡುತ್ತಿದ್ದ ಮಕ್ಕಳು ಪೊಲೀಸರು ನನ್ನ ಸೋದರನನ್ನು ಥಳಿಸಿದ್ದನ್ನು ನೋಡಿದ್ದಾರೆ. ನಾವು ಆತನನ್ನು ಮನೆಗೆ ಕರೆತಂದಾಗ ಆತ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ನಂತರ ಪ್ರಜ್ಞಾಹೀನನಾದ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹೊರಟೆವು. ಮಾರ್ಗಮಧ್ಯೆದಲ್ಲೇ ಆತ ಮೃತಪಟ್ಟಿದ್ದಾನೆ. ಆತ ಯಾವುದೇ ಅಪರಾಧದಲ್ಲಿ ಭಾಗಿಯಾಗಿಲ್ಲ. ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಆತ ದಿನಕ್ಕೆ 250 ರಿಂದ 300 ರೂ. ಸಂಪಾದನೆ ಮಾಡುತ್ತಿದ್ದ” ಎಂದು ಸಂತ್ರಸ್ತನ ಸಹೋದರ 37 ವರ್ಷದ ಸಹಾಬುದ್ದೀನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...