ಜಿ 20 ಶೃಂಗಸಭೆ | ಚೀನಾ ವಿರೋಧಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ

Date:

Advertisements
  • ವಿವಾದಿತ ಸ್ಥಳದಲ್ಲಿ ಜಿ 20 ಸಭೆ ನಡೆಸಲು ಚೀನಾ ಆಕ್ಷೇಪ
  • ಶೃಂಗಸಭೆಗೆ ಹೆಸರು ನೋಂದಾಯಿಸಿಕೊಳ್ಳದ ಟರ್ಕಿ, ಸೌದಿ ಅರೇಬಿಯಾ

ಜಿ 20 ಶೃಂಗಸಭೆ ಸಮಾರಂಭವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜಿಸುತ್ತಿರುವ ಭಾರತ ನಿರ್ಧಾರಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಶನಿವಾರ (ಮೇ 20) ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಆರೋಪಕ್ಕೆ ಭಾರತ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.

ವಿವಾದಿತ ಕಾಶ್ಮೀರ ಪ್ರದೇಶದಲ್ಲಿ ಸಮಾರಂಭ ನಡೆಸುವುದನ್ನು ಚೀನಾ ವಿರೋಧಿಸಿದ್ದು ಶ್ರೀನಗರದಲ್ಲಿ ಆಯೋಜಿಸುವ ಜಿ 20 ಶೃಂಗಸಭೆ ಸಮಾರಂಭಕ್ಕೆ ಟರ್ಕಿ ಹಾಗೂ ಸೌದಿ ಅರೇಬಿಯಾ ರಾಷ್ಟ್ರಗಳು ಹೆಸರು ನೋಂದಾಯಿಸಿಕೊಂಡಿಲ್ಲ.

Advertisements

“ಯಾವುದೇ ವಿವಾದಿತ ಸ್ಥಳಗಳಲ್ಲಿ ಜಿ 20 ಸಭೆಗಳನ್ನು ಆಯೋಜಿಸುವುದನ್ನು ಚೀನಾ ವಿರೋಧಿಸುತ್ತದೆ. ಅಂತಹ ಸಭೆಗಳಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆಗ್ಬಿನ್‌ ಶುಕ್ರವಾರ (ಮೇ 19) ಹೇಳಿದ್ದರು.

ಜಿ 20 ಶೃಂಗಸಭೆಯ ಸಮಾರಂಭಕ್ಕೆ ಸಂಬಂಧಿಸಿ ಚೀನಾ ಹೇಳಿಕೆಗೆ ಭಾರತ ಪ್ರತಿಕ್ರಿಯಿಸಿದೆ.

“ತನ್ನ ಸ್ವಂತ ಭೂಭಾಗದಲ್ಲಿ ಸಬೆಗಳನ್ನು ನಡೆಸಲು ಭಾರತ ಮುಕ್ತವಾಗಿದೆ. ಚೀನಾದೊಂದಿಗೆ ದೇಶ ಸಾಮಾನ್ಯ ಒಪ್ಪಂದ ಮಾಡಿಕೊಳ್ಳಲು ಗಡಿಯಲ್ಲಿ ಚೀನಾ ಶಾಂತಿ ಹಾಗೂ ನೆಮ್ಮದಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

3ನೇ ಜಿ 20 ಪ್ರವಾಸೋದ್ಯಮ ಕಾರ್ಯ ಸಮೂಹ ಸಭೆಯು ಭಾರೀ ಭದ್ರತೆಯೊಂದಿಗೆ ಮೇ 22 ರಿಂದ 24 ರವರೆಗೆ ಶ್ರೀನಗರದಲ್ಲಿ ನಡೆಯಲಿದೆ.

2019ರಲ್ಲಿ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಶೃಂಗಸಭೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿದೆ.

ಶ್ರೀನಗರದಲ್ಲಿ ನಡೆಯುವ ಸಭೆಯಲ್ಲಿ ಜಿ 20 ದೇಶಗಳ ಸುಮಾರು 60 ಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಸುಮಾರು 100 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಬಹುದು ಎಂದು ಅಂದಾಜಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

ಈ ಸಭೆಯಿಂದ ದೂರ ಉಳಿಯಲು ಟರ್ಕಿ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಸೌದಿ ಅರೇಬಿಯಾ ಸಭೆಯಲ್ಲಿ ಭಾಗವಹಿಸಲು ತನ್ನ ಹೆಸರು ನೋಂದಣಿ ಮಾಡಿಕೊಂಡಿಲ್ಲ ಎಂದು ಮೂಲಗಳು ಹೇಳಿವೆ.

ಜಿ 20 ಶೃಂಗಸಭೆ ಸಮಾರಂಭ ಹಿನ್ನೆಲೆ ಕಾಶ್ಮೀರ ಹಾಗೂ ಶ್ರೀನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X