ಮಣಿಪುರ | ಇಂಟರ್‌ನೆಟ್‌ ಸ್ಥಗಿತ ತೆರವು; ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ಮುಂದುವರಿಕೆ

Date:

ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರ ರಾಜ್ಯಕ್ಕೆ ಮೂರು ತಿಂಗಳ ನಂತರ ಸರ್ಕಾರವು ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿದೆ ತೆರವುಗೊಳಿಸಿದೆ.

- Advertisement -

ಸ್ಥಿರ ಐಪಿ ವಿಳಾಸವನ್ನು ಹೊಂದಿರುವವರು ಮಾತ್ರ ಸೀಮಿತ ರೀತಿಯಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು ಎಂದು ಸರ್ಕಾರವು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಯಲಿದೆ. ಸ್ಥಿರ ಐಪಿ ಒಂದನ್ನು ಹೊರತುಪಡಿಸಿ ಯಾವುದೇ ಸಂಪರ್ಕವನ್ನು ಅನುಮತಿಸಲಾಗುವುದಿಲ್ಲ. ಯಾವುದೇ ಚಂದಾದಾರರು ಇತರ ರೀತಿಯ ಸಂಪರ್ಕಗಳನ್ನು ಬಳಸುತ್ತಿರುವುದು ಕಂಡುಬಂದರೆ ಸೇವಾ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ

ಯಾವುದೇ ವೈ-ಫೈ ಹಾಟ್‌ಸ್ಪಾಟ್ ಅನ್ನು ಅನುಮತಿಸಲಾಗುವುದಿಲ್ಲ. ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಿಗೆ ಪ್ರವೇಶವಿಲ್ಲ. ಬಳಕೆದಾರರು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಸಾಫ್ಟ್‌ವೇರ್ ಅನ್ನು ತೆಗೆದುಹಾಕಬೇಕು ಮತ್ತು ಹೊಸದನ್ನು ಸ್ಥಾಪಿಸಬಾರದು ಎಂದು ಸರ್ಕಾರ ಹೇಳಿದೆ. ವಿಪಿಎನ್‌ಗಳು ಇಂಟರ್ನೆಟ್ ಟ್ರಾಫಿಕ್ ಅನ್ನು ಎನ್‌ಕ್ರಿಪ್ಟ್ ಮಾಡುತ್ತದೆ. ಇದರಿಂದಾಗಿ ಮೂರನೇ ವ್ಯಕ್ತಿಗಳಿಗೆ ಆನ್‌ಲೈನ್ ಚಟುವಟಿಕೆಗಳನ್ನು ಟ್ರ್ಯಾಕ್ ಮಾಡುವುದು ಕಷ್ಟವಾಗುತ್ತದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಜನಾಂಗೀಯ ಹಿಂಸಾಚಾರ ಶುರುವಾದ ನಂತರ ಮಣಿಪುರ ಸರ್ಕಾರವು ಇಂಟರ್ನೆಟ್ ನಿಷೇಧದ ಬಗ್ಗೆ ತೀವ್ರ ಟೀಕೆಗೆ ಒಳಗಾಗಿತ್ತು. ಅಂತರ್ಜಾಲ ನಿಷೇಧದಿಂದ ಬ್ಯಾಂಕಿಂಗ್, ಪ್ರವೇಶ ಮತ್ತು ಪ್ರಯಾಣದಂತಹ ಸೇವೆಗಳಿಗೆ ತೊಂದರೆಯುಂಟಾಗಿತ್ತು. ಹಿಂಸಾಚಾರವನ್ನು ಪ್ರಚೋದಿಸುವ ವದಂತಿಗಳು ಮತ್ತು ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯಲು ಇಂಟರ್ನೆಟ್ ನಿಷೇಧ ಅಗತ್ಯ ಎಂದು ಸರ್ಕಾರ ಹೇಳಿದೆ.

ಇಂಟರ್‌ನೆಟ್ ನಿಷೇಧದಿಂದ ಮೊಬೈಲ್ ರೀಚಾರ್ಜ್, ಎಲ್‌ಪಿಜಿ ಸಿಲಿಂಡರ್ ಬುಕಿಂಗ್, ವಿದ್ಯುತ್ ಬಿಲ್‌ಗಳ ಪಾವತಿ ಮತ್ತು ಇತರ ಆನ್‌ಲೈನ್ ಸೇವೆಗಳಲ್ಲದೆ, ಕಚೇರಿಗಳು ಮತ್ತು ಸಂಸ್ಥೆಗಳು ಮತ್ತು ಮನೆಯಿಂದಲೇ ಕೆಲಸ ಮಾಡುವ ಜನರ ನೋವನ್ನು ಸರ್ಕಾರ ಅರಿತುಕೊಂಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ ಇಂಟರ್‌ನೆಟ್‌ ಸ್ಥಗಿತದಿಂದ ದಿನನಿತ್ಯದ ಸೇವೆಗಳಿಗೆ ತೊಂದರೆಯಾಗುತ್ತದೆ ಎಂದು ನಾಗರಿಕ ಹಕ್ಕುಗಳ ಕಾರ್ಯಕರ್ತರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಸರ್ಕಾರಗಳ ಅಭಿಪ್ರಾಯ ಕೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...