ಮರುಕಳಿಸಿದ ಮಣಿಪುರ ಹಿಂಸಾಚಾರ | ಜೂ. 10ರವರೆಗೆ ಅಂತರ್ಜಾಲ ಸೇವೆ ಸ್ಥಗಿತ

Date:

Advertisements
  • ಇದುವರೆಗೆ ಮಣಿಪುರ ಹಿಂಸಾಚಾರದಲ್ಲಿ ಕಸಿದುಕೊಳ್ಳಲಾದ 789 ಶಸ್ತ್ರಾಸ್ತ್ರ ವಶ
  • ಎಸ್‌ಟಿ ಸ್ಥಾನಮಾನ ಸಂಬಂಧ ಮೇಟಿ, ಕುಕಿ ಸಮುದಾಯಗಳ ನಡುವೆ ಘರ್ಷಣೆ

ಮಣಿಪುರ ಹಿಂಸಾಚಾರ ಘಟನೆಗಳು ಇನ್ನೂ ವರದಿಯಾಗುತ್ತಿವೆ. ಈ ಹಿನ್ನೆಲೆ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತವನ್ನು ಇನ್ನೂ ಐದು ದಿನಗಳ ಕಾಲ ಪಶ್ಚಿಮ ಬಂಗಾಳ ಸರ್ಕಾರ ಸೋಮವಾರದಿಂದ (ಜೂನ್‌ 5) ವಿಸ್ತರಣೆ ಮಾಡಿದೆ.

ರಾಜ್ಯದಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗುತ್ತಿವೆ. ಇದನ್ನು ತಡೆಗಟ್ಟುವ ಸಂಬಂಧ ವದಂತಿ ಹಾಗೂ ತಪ್ಪು ಮಾಹಿತಿಗಳು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ಗೃಹ ಆಯುಕ್ತ ಎಚ್‌.ಜ್ಞಾನ ಪ್ರಕಾಶ್ ಈ ಸಂಬಂಧ ಆದೇಶಿಸಿದ್ದು ಮಣಿಪುರ ಹಿಂಸಾಚಾರ ಘಟನೆಗಳನ್ನು ತಡೆಯಲು ಅಂತರ್ಜಾಲ ನಿರ್ಬಂಧವನ್ನು ಜೂನ್‌ 10 ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.

Advertisements

ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗುತ್ತಿವೆ ಎಂದು ಮಣಿಪುರದ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಹೇಳಿದ್ದರು. ಈ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜನರಲ್ಲಿ ಹಿಂಸಾಚಾರ ಮನೋಭಾವ ಪ್ರಚೋದಿಸಲು ದೇಶ ವಿರೋಧಿ ಹಾಗೂ ಸಮಾಜ ಘಾತುಕ ಶಕ್ತಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿಗಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶ ಉಲ್ಲೇಖಿಸಿದೆ.

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವಿಕೆ ಸಂಬಂಧ ಮೇಟಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವಿನ ತಿಕ್ಕಾಟ ಪ್ರಾರಂಭವಾಗಿ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಮಣಿಪುರ ಹಿಂಸಾಚಾರ ತಡೆಗಟ್ಟಲು ಮೊದಲ ಬಾರಿಗೆ ಮೇ 3 ರಂದು ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಯಿತು.

ಎರಡು ಸಮುದಾಯಗಳ ನಡುವಿನ ಗಲಭೆಯಲ್ಲಿ ಸುಮಾರು 75 ಮಂದಿ ಮೃತಪಟ್ಟಿದ್ದಾರೆ. ಸುಮಾರು 35 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ಪ್ರದೇಶದಲ್ಲಿ ಸೇನೆಯು ಇನ್ನೂ ಭಾಗಶಃ ನಿಷೇಧಾಜ್ಞೆ ಜಾರಿಗೊಳಿಸಿದೆ.

ಜಿಲ್ಲೆಗಳಲ್ಲಿ ಸೋಮವಾರ ಕಳೆದ 48-ಗಂಟೆಗಳಲ್ಲಿ ಹಲವಾರು ಕುಕಿ ಸಮುದಾಯದ ಗ್ರಾಮಗಳನ್ನು ಮೇಟಿ ಸಮುದಾಯಕ್ಕೆ ಸೇರಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸುಟ್ಟುಹಾಕಿದ್ದಾರೆ ಎಂದು ಕುಕಿ-ಹ್ಮಾರ್-ಝೋ ಸಮುದಾಯಗಳನ್ನು ಪ್ರತಿನಿಧಿಸುವ ಸಂಘಟನೆಯಾದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಆರೋಪಿಸಿದೆ.

ಕೆಲವು ಜಿಲ್ಲೆಗಳಲ್ಲಿ ಗುಂಡಿನ ದಾಳಿಯ ವರದಿಗಳೂ ಬಂದಿವೆ. ಆದರೆ, ಇಂತಹ ಘಟನೆಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಎಂದು ವರದಿಯಾಗಿದೆ. ಗಲಭೆಯ ಸಂದರ್ಭದಲ್ಲಿ ಕಸಿದುಕೊಳ್ಳಲಾದ ಶಸ್ತ್ರಾಸ್ತ್ರಗಳ ಹುಡುಕಾಟದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ಸೋಮವಾರ ತಿಳಿಸಿದೆ.

ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಭೇಟಿ ನೀಡಿದ ನಂತರ 200 ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಸುದ್ದಿ ಓದಿದ್ದೀರಾ? ಮದುವೆಯಾದ ಮಾರನೆ ದಿನವೇ ಹೃದಯಾಘಾತದಿಂದ ದಂಪತಿ ನಿಧನ

ಮಣಿಪುರ ಹಿಂಸಾಚಾರ ಸಂದರ್ಭದಲ್ಲಿ ಇನ್ಸಾಸ್ ರೈಫಲ್‌ಗಳು, ಎಕೆ ಸರಣಿಯ ರೈಫಲ್‌ಗಳು ಮತ್ತು ಗ್ರೆನೇಡ್ ಲಾಂಚರ್‌ಗಳು ಸೇರಿದಂತೆ ಸುಮಾರು 4,000 ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಈ ಹಿಂದೆ ಹೇಳಿದ್ದರು.

ಇಲ್ಲಿಯವರೆಗೆ ಒಟ್ಟು 789 ಶಸ್ತ್ರಾಸ್ತ್ರಗಳು ಮತ್ತು 10,648 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X