ಜಗನ್‌ಮೋಹನ್‌ ರೆಡ್ಡಿ ದೇಶದ ಅತ್ಯಂತ ಶ್ರೀಮಂತ ಸಿಎಂ; ಮಮತಾ ಬ್ಯಾನರ್ಜಿ ಬಳಿ ಕಡಿಮೆ ಆಸ್ತಿ

Date:

  • ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ
  • 30 ಮುಖ್ಯಮಂತ್ರಿಗಳಲ್ಲಿ 13 ಮಂದಿ ಕೊಲೆ, ಕೊಲೆ ಯತ್ನ ಆರೋಪ

ಭಾರತದ ಮುಖ್ಯಮಂತ್ರಿಗಳಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅತ್ಯಂತ ಶ್ರೀಮಂತರಾಗಿದ್ದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ನೀಡಿದೆ.

ಎಡಿಆರ್ ಸಂಸ್ಥೆ ಅಭ್ಯರ್ಥಿಗಳ ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ ನೀಡಿದ್ದು, ದೇಶದ 30 ಹಾಲಿ ಮುಖ್ಯಮಂತ್ರಿಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಅವರ ಒಟ್ಟು ಆಸ್ತಿ 510 ಕೋಟಿ ರೂ. ಇದ್ದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಮಾರು 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ.

ಎಲ್ಲಾ 30 ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಪ್ರಮಾಣಪತ್ರಗಳನ್ನು ವಿಶ್ಲೇಷಿಸಿದ ನಂತರ ವರದಿ ನೀಡಲಾಗಿದೆ ಎಂದು ಎಡಿಆರ್ ಮತ್ತು ಚುನಾವಣಾ ಕಾವಲುಪಡೆ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇಶದ 28 ರಾಜ್ಯಗಳಲ್ಲಿ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ ಮತ್ತು ಪುದುಚೇರಿಗಳಲ್ಲಿ ಮುಖ್ಯಮಂತ್ರಿಗಳು ಇದ್ದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಲೆಫ್ಟಿನೆಂಟ್ ಗವರ್ನರ್‌ ಕಾರ್ಯನಿರ್ವಹಿಸುತ್ತಿದ್ದಾರೆ.

30 ಮುಖ್ಯಮಂತ್ರಿಗಳ ಪೈಕಿ 29 (ಶೇ. 97) ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಮುಖ್ಯಮಂತ್ರಿಯು ಸರಾಸರಿ ಆಸ್ತಿ 33.96 ಕೋಟಿ ರೂ. ಎಂದು ಎಡಿಆರ್ ಹೇಳಿದೆ.

30 ಮುಖ್ಯಮಂತ್ರಿಗಳಲ್ಲಿ 13 (ಶೇ. 43) ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವುದಾಗಿ ತಮ್ಮ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡಿದ್ದಾರೆ.

ಗಂಭೀರ ಕ್ರಿಮಿನಲ್ ಪ್ರಕರಣಗಳು ಜಾಮೀನು ರಹಿತ ಅಪರಾಧಗಳಾಗಿದ್ದು, ಐದು ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ವರದಿ ಹೇಳಿದೆ.

ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ (510 ಕೋಟಿ ರೂ.ಗಿಂತ ಹೆಚ್ಚು), ಅರುಣಾಚಲ ಪ್ರದೇಶದ ಪೇಮಾ ಖಂಡು (163 ಕೋಟಿ ರೂ.) ಮತ್ತು ಒಡಿಶಾದ ನವೀನ್ ಪಟ್ನಾಯಕ್ (ರೂ. 63 ಕೋಟಿಗಿಂತ ಹೆಚ್ಚು) ಆಸ್ತಿ ಹೊಂದಿರುವ ಅಗ್ರ ಮೂರು ಮುಖ್ಯಮಂತ್ರಿಗಳು.

ಕನಿಷ್ಠ ಘೋಷಿತ ಆಸ್ತಿ ಹೊಂದಿರುವ ಮೂವರು ಮುಖ್ಯಮಂತ್ರಿಗಳೆಂದರೆ – ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷಕ್ಕೂ ಹೆಚ್ಚು, ಕೇರಳದ ಪಿಣರಾಯಿ ವಿಜಯನ್ 1 ಕೋಟಿಗೂ ಹೆಚ್ಚು ಮತ್ತು ಹರಿಯಾಣದ ಮನೋಹರ್ ಲಾಲ್ 1 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಇಬ್ಬರೂ 3 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ...

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ...