ಕೆನಡಾದಲ್ಲಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ; ವಿದೇಶಾಂಗ ಸಚಿವ ಜೈಶಂಕರ್‌ ಆಕ್ರೋಶ

Date:

ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಖಲಿಸ್ತಾನ ಸಂಘಟನೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ ನಡೆಸಿರುವುದಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಕೆನಡಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಜೈಶಂಕರ್, “ಕೆನಡಾದಲ್ಲಿ ಸಿಖ್ ಸಮುದಾಯವನ್ನು ಒಲೈಸಲು ಅಲ್ಲಿನ ಸರ್ಕಾರ ಖಲಿಸ್ತಾನಿಗಳಿಗೆ ಭಾರೀ ಬೆಂಬಲ ನೀಡಿದೆ. ಮತಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿ ಉಗ್ರ ಸಂಘಟನೆಗಳ ಚಟುವಟಿಕೆಗೆ ಅವಕಾಶ ನೀಡುವುದು ತಪ್ಪು. ಇದು ಖಲಿಸ್ತಾನಕ್ಕೆ ಮಾತ್ರವಲ್ಲ, ಭವಿಷ್ಯದಲ್ಲಿ ದ್ವಿಪಕ್ಷೀಯ ಸಂಬಂಧಗಳ ಕಾರಣಗಳಿಂದ ಕೆನಡಾ ದೆಶಕ್ಕೂ ಒಳ್ಳೆಯ ಬೆಳವಣಿಯಲ್ಲ” ಎಂದು ಎಚ್ಚರಿಸಿದ್ದಾರೆ.

“ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಪ್ರತ್ಯೇಕವಾದಿಗಳಿಗೆ, ಉಗ್ರಗಾಮಿಗಳಿಗೆ, ಹಿಂಸಾಚಾರವನ್ನು ಪ್ರತಿಪಾದಿಸುವ ಜನರಿಗೆ ಜಾಗ ನೀಡಲಾಗಿದೆ. ಅವರ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಇದು ಕೆನಡಾಕ್ಕೆ ಒಳ್ಳೆಯದಲ್ಲ. ಭಾರತದ ಜೊತೆಗಿನ ಸಂಬಂಧಕ್ಕೆ ಧಕ್ಕೆಯಾಗಲಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಕೆನಡಾದಲ್ಲಿ ಖಲಿಸ್ತಾನ ಸಂಘಟನೆ ಗಟ್ಟಿಯಾಗಿ ಬೇರೂರಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ಹಾಗೂ ಅಮೆರಿಕದಲ್ಲಿ ಹಿಂದೂ ದೇಗುಲದ ಮೇಲೆ ಖಲಿಸ್ತಾನ ಉಗ್ರರು ದಾಳಿ ಮಾಡಿದ್ದರು. ಇದೀಗ ಕೆನಾಡಾದಲ್ಲಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ದಚಿತ್ರ ಮೆರೆವಣಿಗೆ ಮಾಡಿದ್ದಾರೆ. ಜೂನ್ 4 ರಂದು ಈ ಘಟನೆ ನಡೆದಿದೆ. ಜೂನ್ 4 ರಂದು ಆಪರೇಶನ್ ಬ್ಲೂಸ್ಟಾರ್ ಕಾರ್ಯಾಚರಣೆ ವರ್ಷಾಚರಣೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಒಡಿಶಾ ರೈಲು ದುರಂತ: ಟಿವಿ ನೇರ ಪ್ರಸಾರ ನೋಡಿ ಪೋಷಕರ ಮಡಿಲು ಸೇರಿದ ಗಾಯಾಳು

ಕಾಂಗ್ರೆಸ್ ಖಂಡನೆ

ಇಂದಿರಾ ಗಾಂಧಿಯವರ ಹತ್ಯೆಯ ಸ್ತಬ್ಧಚಿತ್ರ ಇದ್ದ ಒಂದು ವಿಡಿಯೋವನ್ನು ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದರು. 

“ಕೆನಡಾದ ಬ್ರಾಂಪ್ಟನ್ ನಗರದಲ್ಲಿ ನಡೆದ 5 ಕಿಮೀ ಉದ್ದದ ಪರೇಡ್‌ನಲ್ಲಿ ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಸ್ತಬ್ಧಚಿತ್ರ ಕಂಡು ಭಾರತೀಯನಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ. ಇದು ಪಕ್ಷಕ್ಕೆ ಮಾತ್ರವಲ್ಲ, ರಾಷ್ಟ್ರದ ಇತಿಹಾಸದ ಗೌರವಕ್ಕೆ ತಂದ ಚ್ಯುತಿಯಾಗಿದೆ. ಪ್ರಧಾನಿಯೊಬ್ಬರ ಸಾವನ್ನು ವಿಜೃಂಭಿಸುವುದು ದೇಶಕ್ಕೆ ಮಾಡಿದ ಅಪಮಾನ ಹಾಗೂ ನೋವಿನ ಸಂಗತಿಯಾಗಿದೆ. ಇದು ಸಾರ್ವತ್ರಿಕ ಖಂಡನೆಯ ವಿಷಯವಾಗಿದೆ”ಎಂದು ದಿಯೋರಾ ಟ್ವೀಟ್ ಮಾಡಿದ್ದರು.

ಇಂದಿರಾ ಗಾಂಧಿಯವರ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆಯನ್ನು ‘ಹೇಯ ಕೃತ್ಯ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಖಂಡಿಸಿದ್ದು, ಕೆನಡಾದ ಅಧಿಕಾರಿಗಳು ಈ ಘಟನೆಗೆ ಕಾರಣರಾದವರ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳುವಂತೆ ವಿದೇಶಾಂಗ ಸಚಿವರನ್ನು ಒತ್ತಾಯಿಸಿದ್ದಾರೆ.

ಭಾರತದಲ್ಲಿರುವ ಕೆನಡಾದ ಉನ್ನತ ರಾಯಭಾರಿ ಕ್ಯಾಮರೂನ್ ಮ್ಯಾಕೆ ಗುರುವಾರ ಘಟನೆಯನ್ನು ಖಂಡಿಸಿದ್ದು,”ಕೆನಡಾದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಅಥವಾ ವೈಭವೀಕರಿಸುವುದಕ್ಕೆ ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

1984ರಲ್ಲಿ ಪಂಜಾಬಿನ ಅಮೃತಸರದ ಸ್ವರ್ಣಮಂದಿರದಲ್ಲಿ ಅವಿತು ಕುಳಿತು ರಾಜ್ಯಕ್ಕೆ ಕಂಟಕವಾಗಿದ್ದ ಖಲಿಸ್ತಾನ ಉಗ್ರ ಸಂಘಟನೆ ಮುಖ್ಯಸ್ಥ ಬ್ರಿಂದನ್‌ವಾಲೆ ಹಾಗೂ ಇತರ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ಕಾರ್ಯಾಚರಣೆಗೆ ಆದೇಶ ನೀಡಿದ್ದರು. ಆಪರೇಶನ್ ಬ್ಲೂ ಸ್ಟಾರ್ ಹೆಸರಿನಲ್ಲಿ ಈ ಕಾರ್ಯಾಚರಣೆ ನಡೆದಿತ್ತು. ಭಾರತೀಯ ಸೇನೆ ಯಶಸ್ವಿಯಾಗಿ ಬ್ರಿಂದನ್ ವಾಲೆ ಹಾಗೂ ಖಲಿಸ್ತಾನ ಉಗ್ರರನ್ನು ಮಟ್ಟಹಾಕಿ ಪಂಜಾಬ್ ರಾಜ್ಯವನ್ನು ಉಗ್ರರ ಕಪಿಮುಷ್ಠಿಯಿಂದ ಬಿಡಿಸಿತ್ತು. ಈ ಘಟನೆ ನಡೆದ ನಂತರದ ದಿನಗಳಲ್ಲಿ ಖಲಿಸ್ತಾನ ಉಗ್ರರಿಂದ ಇಂದಿರಾ ಗಾಂಧಿಯವರು ಹತಾತ್ಮರಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...