ಮಾಧ್ಯಮಗಳಿಗೆ ಪ್ರಕರಣಗಳ ಕುರಿತ ಸಂದರ್ಶನ; ಸುಪ್ರೀಂ ಕೋರ್ಟ್ ಆಕ್ಷೇಪ

Date:

  • ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ
  • ನ್ಯಾಯಾಧೀಶರು ಸಂದರ್ಶನ ನೀಡಿದರೆ ಈ ಪ್ರಕರಣ ವಿಚಾರಣೆ ನಡೆಸುವ ಹಾಗಿಲ್ಲ ಎಂದ ಸುಪ್ರೀಂ ಪೀಠ

ನ್ಯಾಯಾಧೀಶರು ಮಾಧ್ಯಮಗಳಿಗೆ ತಮ್ಮ ಮುಂದಿನ ಪ್ರಕರಣಗಳ ಕುರಿತ ಸಂದರ್ಶನ ನೀಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿರುವ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ, “ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿವಿ ಸಂದರ್ಶನಗಳನ್ನು ನ್ಯಾಯಾಧೀಶರು ನೀಡುವುದು ಸರಿಯಲ್ಲ, ಆದರೆ ನ್ಯಾಯಾಧೀಶರೊಬ್ಬರು ಸಂದರ್ಶನ ನೀಡಿದರೆ ನಂತರ ಅವರು ಆ ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆ ನಡೆಸುವ ಹಾಗಿಲ್ಲ” ಎಂದು ತಿಳಿಸಿತು.

ಅಲ್ಲದೆ ಈ ನಿರ್ದಿಷ್ಟ ಪ್ರಕರಣ ಕುರಿತಂತೆ ಸುಪ್ರೀಂ ಕೋರ್ಟ್, ಕೊಲ್ಕತ್ತ ಹೈಕೋರ್ಟ್‌ನಿಂದ ವರದಿ ಕೇಳಿದೆ. ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರನ್ನು ಸುಮನ್ ಡೇ ಸಂದರ್ಶನ ಮಾಡಿದ್ದರೇ ಎಂಬುದನ್ನು ಪರಿಶೀಲಿಸುವಂತೆ ಕೊಲ್ಕತ್ತಾ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿ ಶುಕ್ರವಾರದೊಳಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸ್ಪಷ್ಟೀಕರಣದೊಂದಿಗೆ ಅಫಿಡವಿಟ್ ಸಲ್ಲಿಸಬೇಕು ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕ್ರಮ ತಿಳಿಸಿ: ಕೇಂದ್ರಕ್ಕೆ ಮಾಹಿತಿ ಕೇಳಿದ ‘ಸುಪ್ರೀಂ’

ಒಂದು ವೇಳೆ ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದೇ ಆದಲ್ಲಿ ಅವರು ಈ ಪ್ರಕರಣ ವಿಚಾರಣೆ ನಡೆಸುವ ಹಾಗಿಲ್ಲ ಮತ್ತು ಬೇರೊಂದು ಪೀಠ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಿಬಿಐ ಮತ್ತು ಇ.ಡಿ ತನಿಖೆಗೆ ಸೂಚಿಸಿ ಕೊಲ್ಕತ್ತಾ ಹೈಕೋರ್ಟ್‌ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಪೀಠವು ಅಸಮಾಧಾನ ಹೊರಹಾಕಿದೆ.

ತನಿಖೆಗೆ ಆದೇಶಿಸಿ ತೀರ್ಪು ನೀಡಿದ ನ್ಯಾಯಾಧೀಶ ಗಂಗೋಪಾಧ್ಯಾಯ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಸುದ್ದಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...