ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

Date:

2008 ರಲ್ಲಿ ನಡೆದ ದೆಹಲಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆಯ ಎಲ್ಲ ಐವರು ಆರೋಪಿಗಳನ್ನು ದೆಹಲಿ ಹೈಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

- Advertisement -

ಹೆಡ್‌ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿದ್ದ ಸೌಮ್ಯಾ ವಿಶ್ವನಾಥನ್ ಅವರು 2008 ರ ಸೆಪ್ಟೆಂಬರ್‌ನಲ್ಲಿ ಕಚೇರಿಯಿಂದ ಮನೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಹಂತಕರು ಗುಂಡು ಹಾರಿಸಿ ಕೊಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

2008ರಲ್ಲಿ 25 ವರ್ಷದ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್, ಬಲ್ಜೀತ್ ಮಲಿಕ್ ಮತ್ತು ಅಜಯ್ ಸೇಥಿ ಅವರನ್ನು ದೆಹಲಿಯ ಸಾಕೇತ್ ನ್ಯಾಯಾಲಯ ದೋಷಿಗಳೆಂದು ತೀರ್ಪು ನೀಡಿದೆ.

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸೌಮ್ಯ ವಿಶ್ವನಾಥನ್ ಅವರ ತಾಯಿ, “ನಮ್ಮ ಮಗಳು ಮೃತಪಟ್ಟಿದ್ದಾಳೆ. ಈ ತೀರ್ಪಿನಿಂದ ಇತರರಿಗೆ ಪಾಠವಾಗುತ್ತದೆ. ಇಲ್ಲದಿದ್ದರೆ ಅಪರಾಧಿಗಳಿಗೆ ಬೆಂಬಲ ಸಿಕ್ಕಂತಾಗುತ್ತದೆ. ಈ ರೀತಿಯ ತೀರ್ಪಿನಿಂದ ಅಪರಾಧಿಗಳ ಒಂದು ಸಮೂಹವಾದರೂ ಕ್ರೌರ್ಯ ನಡೆಸಲು ಹಿಂಜರಿಯುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅನ್‌ವೆರಿಫೈಡ್ ಟ್ವಿಟರ್ ಬಳಕೆದಾರರಿಗೆ ಶಾಕಿಂಗ್ ಸುದ್ದಿ: ಪೋಸ್ಟ್, ಲೈಕ್, ರೀಟ್ವಿಟ್ಗೂ ಇನ್ಮುಂದೆ ಹಣ ಪಾವತಿಸಬೇಕು !

ಯುವ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008 ರಂದು ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಫೋರೆನ್ಸಿಕ್ ವರದಿಗಳು ತಲೆಗೆ ಗುಂಡೇಟಿನಿಂದ ಸಾವಿಗೆ ಕಾರಣವನ್ನು ಬಹಿರಂಗಪಡಿಸುವವರೆಗೂ ಕಾರು ಅಪಘಾತ ಎಂದು ನಂಬಲಾಗಿತ್ತು.

ಸಿಸಿಟಿವಿ ದೃಶ್ಯಗಳು ಸೌಮ್ಯ ವಿಶ್ವನಾಥನ್ ಅವರ ಹತ್ಯೆಯ ಬಗ್ಗೆ ಹೆಚ್ಚಿನ ಸುಳಿವು ನೀಡಿದವು. ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಾದ ರವಿ ಕಪೂರ್ ಮತ್ತು ಅಮಿತ್ ಶುಕ್ಲಾ ಅವರು ಹೆಚ್ಚಿನ ವಿಚಾರಣೆಯ ಸಮಯದಲ್ಲಿ ಹತ್ಯೆಯನ್ನು ಒಪ್ಪಿಕೊಂಡಿದ್ದರು.

ಆರೋಪ ಪಟ್ಟಿಯನ್ನು ಜೂನ್ 2010 ರಲ್ಲಿ ಸಲ್ಲಿಸಲಾಯಿತು, ನಂತರ ನವೆಂಬರ್ 2010 ರಲ್ಲಿ ವಿಚಾರಣೆ ಪ್ರಾರಂಭವಾಯಿತು. ಜುಲೈ 2016 ರಲ್ಲಿ ವಿಚಾರಣೆ ಮುಕ್ತಾಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...