ಸೋದರನಿಂದ ಗರ್ಭವತಿ; ಅಪ್ರಾಪ್ತೆಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ

Date:

ತನ್ನ ಸೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತೆಗೆ ವೈದ್ಯಕೀಯ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.

ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿ ಪರಿಗಣಿಸಿದ ನ್ಯಾಯಮೂರ್ತಿ ಜಿಯಾದ್ ರಹಮಾನ್ ಎ ಎ ಅವರು, “7 ತಿಂಗಳ ಗರ್ಭದ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ” ಎಂದು ಅಭಿಪ್ರಾಯಪಟ್ಟರು.

ವೈದ್ಯಕೀಯವಾಗಿ ಗರ್ಭಾವಸ್ಥೆ ಅಂತ್ಯಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಅಪ್ರಾಪ್ತ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಾಸ್ತವಾಂಶ ಪರಿಗಣಿಸಿ ಮಗು ಸೋದರನಿಂದಲೇ ಜನಿಸುವುದರಿಂದ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ. ಇಂತಹ ಸಂದರ್ಭಗಳಲ್ಲಿ ಗರ್ಭಾವಸ್ಥೆ ಅಂತ್ಯಗೊಳಿಸುವ ಅರ್ಜಿದಾರರ ಕೋರಿಕೆಗೆ ಅನುಮತಿ ನೀಡುವುದು ಅನಿವಾರ್ಯವಾಗುತ್ತದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಆದೇಶ ಹೊರಡಿಸಿದ ಹೊರತಾಗಿಯೂ ವೈದ್ಯಕೀಯ ಮಂಡಳಿ ಒತ್ತಿ ಹೇಳಿರುವಂತೆ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. ಹೀಗಾಗಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

“ಗರ್ಭಾವಸ್ಥೆ ಮುಂದುವರಿಸುವುದು ಹುಡುಗಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಧಕ್ಕೆ ಉಂಟುಮಾಡುವ ಸಾಧ್ಯತೆಯಿದ್ದು, ಹದಿಹರೆಯದ ಗರ್ಭಧಾರಣೆಯ ತೊಡಕುಗಳಿಂದ ಆಕೆಯ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ, ಅಪ್ರಾಪ್ತ ಬಾಲಕಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ವೈದ್ಯಕೀಯ ಗರ್ಭಧಾರಣೆಯ ಮುಕ್ತಾಯಕ್ಕೆ ಅರ್ಹಳಾಗಿದ್ದಾಳೆ” ಎಂದು ವೈದ್ಯಕೀಯ ಮಂಡಳಿ ಅಭಿಪ್ರಾಯಪಟ್ಟಿತ್ತು.

ಹೀಗಾಗಿ ನ್ಯಾಯಾಲಯ “ಯಾವುದೇ ವಿಳಂಬವಿಲ್ಲದೆ ಬಾಲಕಿಯ ಗರ್ಭಧಾರಣೆ ಅಂತ್ಯಗೊಳಿಸಲು ತುರ್ತು ಕ್ರಮ ತೆಗೆದುಕೊಳ್ಳುವಂತೆ” ಜಿಲ್ಲಾ ವೈದ್ಯಾಧಿಕಾರಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...