ಬಿಜೆಪಿಗೆ ಅವಕಾಶ ಕೊಟ್ಟರೆ ಕೇರಳ ಹೊತ್ತಿ ಉರಿಯಲಿದೆ: ಅರುಂಧತಿ ರಾಯ್‌

Date:

ʻಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ರಾತ್ರಿ ನನಗೆ ನಿದ್ದೆ ಬರಲಿಲ್ಲʼ ಎಂದು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್‌ ಹೇಳಿದ್ದಾರೆ.

ಕೇರಳದ ಫೋರ್ಟ್ ಕೊಚ್ಚಿಯಲ್ಲಿ ನಡೆದ ಯುವ ಸಾಹಿತ್ಯೋತ್ಸವ ಕಾರ್ಯಕ್ರಮ ‘ಯುವಧಾರ’ದಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಲೇಖಕಿ, ಕೇರಳದಲ್ಲಿ ಬಿಜೆಪಿ ನಮಗೊಂದು ಅವಕಾಶ ಕೊಡಿ ಎಂದು ಕೇಳುತ್ತಿದೆ. ಇದು ಉರುವಲು ಬೆಂಕಿಯನ್ನು ಕೇಳಿದ ರೀತಿಯಲ್ಲಿದೆ. ನೀವೇನಾದರೂ ಬಿಜೆಪಿಗೆ ಅವಕಾಶ ನೀಡಿದರೆ ರಾಜ್ಯ ಹೊತ್ತಿ ಉರಿಯಲಿದೆ ಎಂದು ಖ್ಯಾತ ಲೇಖಕಿ ಅರುಂಧತಿ ರಾಯ್ ಹೇಳಿದ್ದಾರೆ.

ದಕ್ಷಿಣ ಭಾರತದಲ್ಲಿ ಅಧಿಕಾರ ಹೊಂದಿದ್ದ ಏಕೈಕ ರಾಜ್ಯ ಕರ್ನಾಟಕವನ್ನು ಇದೀಗ ಬಿಜೆಪಿ ಕಳೆದುಕೊಂಡಿದೆ. ಬಿಜೆಪಿಯನ್ನು ದೂರವಿಡುವುದನ್ನು ಕೇರಳ ಮುಂದುವರಿಸಬೇಕು ಎಂದು ರಾಯ್‌ ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಕೇರಳ ಭೇಟಿಯ ಸಂದರ್ಭದಲ್ಲಿ ಚರ್ಚ್ ಮುಖ್ಯಸ್ಥರು ಅವರನ್ನು ಸ್ವಾಗತಿಸಿ ಚರ್ಚೆ ನಡೆಸಿರುವುದಕ್ಕೆ ರಾಯ್‌ ಬೇಸರ ವ್ಯಕ್ತಪಡಿಸಿದ್ದಾರೆ.

ʻಚರ್ಚ್‌ನ ಮುಖ್ಯಸ್ಥರು ಪ್ರಧಾನಿಯವರನ್ನು ಭೇಟಿಯಾಗುವುದನ್ನು ನೋಡಿದಾಗ ದೇಶದಲ್ಲಿ ಏನಾಗುತ್ತಿದೆ ಎಂಬುದರ ಅರಿವು ಅವರಿಗೆ ಇಲ್ಲದಾಯಿತೆ ಎಂಬ ಪ್ರಶ್ನೆ ನನ್ನಲ್ಲಿ ಮೂಡಿತ್ತು. ಮಣಿಪುರ ಛತ್ತೀಸ್‌ಗಢ ಹಾಗೂ ಜಾರ್ಖಂಡ್‌ನಲ್ಲಿ ಕ್ರಿಶ್ಚಿಯನ್ನರನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂಬುದು ನಿಮಗೆ ತಿಳಿದಿದೆಯೇ? ಕಳೆದ ಎರಡು ವರ್ಷಗಳಲ್ಲಿ ಕ್ರಿಶ್ಚಿಯನ್ ಚರ್ಚ್‌ಗಳ ಮೇಲೆ 300 ದಾಳಿಗಳು ನಡೆದಿವೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಅನುಯಾಯಿಗಳಿಗೆ ಏನು ಉತ್ತರ ಕೊಡುತ್ತೀರಿ?ʼ ಎಂದು ರಾಯ್ ಪ್ರಶ್ನಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...