ಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಅಮಾನು‍ಷ ಹಲ್ಲೆ

Date:

Advertisements

ಮೇಕೆಗಳು ಮತ್ತು ಪಾರಿವಾಳಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಾಲ್ವರು ದಲಿತ ಸಮುದಾಯದ ಬಾಲಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಂಪುರದಲ್ಲಿ ನಡೆದಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶ್ರೀರಾಮಪುರ ತಹಸಿಲ್‌ನ ಹರೇಗಾಂವ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಸಂತ್ರಸ್ತರಲ್ಲಿ ಓರ್ವ ಬಾಲಕ ಮತ್ತು ಅವರ ಅಜ್ಜಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ತಿಳಿಸಿದ್ದಾರೆ.

Advertisements

ಬಾಲಕ ತನ್ನ ಮೇಲೆ ಹಲ್ಲೆ ನಡೆಸಿ, ಮೂತ್ರ ವಿಸರ್ಜನೆ ಮಾಡಲಾಗಿದೆ ಮತ್ತು ಉಗುಳಲಾಗಿದೆ, ವಿವಸ್ತ್ರಗೊಳಿಸಿ, ತಲೆಕೆಳಗಾಗಿ ನೇತುಹಾಕಲಾಯಿತು ಎಂದು ಹೇಳಿರುವುದಾಗಿ ಪ್ರಕಾಶ್ ಅಂಬೇಡ್ಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಈ ಜಾತಿ ತಾರತಮ್ಯ, ಬಹಿಷ್ಕಾರ, ನಿಂದನೆ, ಅವಮಾನ, ಹಿಂಸೆ ಮತ್ತು ಕ್ರೌರ್ಯ ಹೊಸದಲ್ಲ ಅಥವಾ ಸರ್ಕಾರದ ಉದಾಸೀನತೆಯೂ ಅಲ್ಲ. ನಾವು ಈ ಅಸಡ್ಡೆಯನ್ನು ಸವಾಲು ಮಾಡುತ್ತೇವೆ ಮತ್ತು ಬದಲಾಯಿಸುತ್ತೇವೆ. ನಾನು ನಿಮಗೆ ಭರವಸೆ ನೀಡುತ್ತೇನೆ. ಇಂತಹ ಕೃತ್ಯಗಳು ಮಹಾರಾಷ್ಟ್ರದಲ್ಲಿ ಈ ಹಿಂದೆಯೂ ನಡೆದಿವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ದಲಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುವ ಅಪರಾಧಗಳಿಗೆ ಶಿಕ್ಷೆಯಾಗದಿರುವ ಕಾರಣಕ್ಕೆ ಜಾತಿ ತಾರತಮ್ಯದ ಹಿಂದಿರುವ ಕೊಳಕು ಮನಸ್ಥಿತಿ ಮತ್ತಷ್ಟು ಹೆಚ್ಚಾಗುತ್ತಾ ಹೋಗುತ್ತಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕಾಶ್ ಅಂಬೇಡ್ಕರ್ ಅವರು ತಮ್ಮ ಟ್ವೀಟ್ ಅನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X