ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

Date:

ʻಕಾಂಗ್ರೆಸ್ ಪಕ್ಷವು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ನಾವು ಆ ಪಕ್ಷವನ್ನು ಬೆಂಬಲಿಸಲಿದ್ದೇವೆʼ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ಕದನದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಸಂಭವನೀಯ ಕಾರ್ಯತಂತ್ರದ ಕುರಿತು ಇದೇ ಮೊದಲ ಬಾರಿ, ಟಿಎಂಸಿಯ ನಿಲುವನ್ನು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

 “ಕಾಂಗ್ರೆಸ್ ಎಲ್ಲೆಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ. ನಾವು ಅವರಿಗೆ ಬೆಂಬಲ ನೀಡುತ್ತೇವೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಇದಕ್ಕೆ ಪ್ರತಿಯಾಗಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಇತರ ಪಕ್ಷಗಳನ್ನು ಸಹ ಬೆಂಬಲಿಸಬೇಕು” ಎಂದು ಬ್ಯಾನರ್ಜಿ  ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻನಾನು ನಿಮಗೆ ಕರ್ನಾಟಕದಲ್ಲಿ ಬೆಂಬಲ ನೀಡುತ್ತಿದ್ದೇನೆ. ಆದರೆ ನೀವು ಪ್ರತಿದಿನ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದೀರಿ. ಇದು ಸರಿಯಲ್ಲ. ಇದನ್ನು ನಿಲ್ಲಿಸಬೇಕು. ನಿಮಗೆ ಅನುಕೂಲವಾಗಿ ಏನನ್ನಾದರೂ ಪಡೆಯಲು ಬಯಸಿದರೆ, ನೀವು ಕೆಲವು ಪ್ರದೇಶದಲ್ಲಿ ತ್ಯಾಗಕ್ಕೂ ಸಿದ್ದರಿರಬೇಕುʼ ಎಂದು ಮಮತಾ ಹೇಳಿದ್ಧಾರೆ.

ʻಕರ್ನಾಟಕದಲ್ಲಿ ಬಿಜೆಪಿ ಅಹಂಕಾರ, ತಾರತಮ್ಯ ವರ್ತನೆ, ಕೇಂದ್ರ ಏಜೆನ್ಸಿಗಳ ದುರ್ಬಳಕೆ ಮತ್ತು ಜನಸಾಮಾನ್ಯರ ವಿರುದ್ಧ ದೌರ್ಜನ್ಯಗಳು ಹೀನಾಯ ಸೋಲಿಗೆ ಕಾರಣವಾಗಿವೆ. ಬಿಜೆಪಿಯ ದಬ್ಬಾಳಿಕೆಯ ಆಡಳಿತದ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ನಾನು ವಂದಿಸುತ್ತೇನೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಚುನಾವಣೆ ನಡೆಯಲಿವೆ. ಈ ರಾಜ್ಯಗಳಲ್ಲೂ ಬಿಜೆಪಿ ಸೋಲುವುದು ಖಚಿತʼ ಎಂದು ದೀದಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ  ಬಳಿಕ ಟಿಎಂಸಿ ಮುಖ್ಯಸ್ಥೆ ನೀಡಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಒಡೆದ ಮನೆಯಾದ ಬಿಜೆಪಿ; ಕಾಂಗ್ರೆಸ್‌ಗೆ ಅಚ್ಚರಿಯ ಲಾಭ?

ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ...