ಜುಲೈ 6 ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಭಾವಚಿತ್ರ ವೈರಲ್ ಆದ ಮಣಿಪುರದಲ್ಲಿ ಪ್ರತಿಭಟನೆ ಹಾಗೂ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮಣಿಪುರ ರಾಜ್ಯ ಸರ್ಕಾರ ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ವೆಂದು ಘೊಷಿಸಿದೆ.
ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಮಣಿಪುರ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ವಿರೋಧಿಸಿ ಮಂಗಳವಾರ (ಸೆ.26) ನಡೆದ ಬೃಹತ್ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
17 ವರ್ಷದ ಹಿಮಾಜ್ ಲಿಂಥೋಯಿನ್‌ಗಂಬಿ ಹಾಗೂ 20 ವರ್ಷದ ಫಿಮಜ್ ಹೇಮಜಿತ್ ಮೃತ ದುರ್ದೈವಿಗಳು. ಇಬ್ಬರು ವಿದ್ಯಾರ್ಥಿಗಳನ್ನು ಕಾಡು ಪ್ರದೇಶದ ಹುಲ್ಲಿನ ಮೇಲೆ ಕುಳ್ಳಿರಿಸಲಾಗಿದೆ. ಈ ಭಾವಚಿತ್ರದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದೂಕು ಹಿಡಿದು ಹಿಂಭಾಗದಲ್ಲಿ ನಿಂತಿದ್ದಾರೆ. ಮತ್ತೊಂದು ಭಾವಚಿತ್ರದಲ್ಲಿ ವಿದ್ಯಾರ್ಥಿಗಳ ಮೃತದೇಹಗಳು ವೈರಲ್ ಆಗಿದೆ.
ಇವೆರಡು ಭಾವಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪ್ರತಿಭಟನೆ ಹಿಂಸಾಚಾರ ಹೆಚ್ಚಾಗಿದೆ. ಜನಾಂಗೀಯ ಹಿಂಸಾಚಾರವು ಉತ್ತುಂಗದಲ್ಲಿದ್ದ ಜುಲೈ ಆರಂಭದಲ್ಲಿ ಇವರಿಬ್ಬರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟ್ವಿಟರ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ರೀತಿಯ ಹಿಂಸಾತ್ಮಕ ಚಟುವಟಿಕೆಗಳನ್ನು ವರದಿ ಮಾಡುವುದನ್ನು ರಾಜ್ಯ ಸರ್ಕಾರವು ಅತ್ಯಂತ ಸೂಕ್ಷ್ಮವಾಗಿ ಗಂಭೀರವಾಗಿ ಪರಿಗಣಿಸುತ್ತದೆ.
ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಇದೀಗ 5 ತಿಂಗಳಿಂದ ನಿಷೇಧಕ್ಕೊಳಪಟ್ಟಿದ್ದ ಮೊಬೈಲ್ ಇಂಟರ್ನೆಟ್ ಮತ್ತೆ ಸ್ಥಾಪಿತಗೊಂಡ ಬೆನ್ನಲ್ಲೇ ವಿದ್ಯಾರ್ಥಿಗಳ ಫೋಟೋ ವೈರಲ್ ಆಗಿದ್ದು, ಪ್ರತಿಭಟನೆ ಆರಂಭವಾಗಿದೆ. ನೂರಾರು ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಮಂಗಳವಾರ(ಸೆ.27) ಆಗ್ರಹಿಸಿದ್ದಾರೆ.
ಪ್ರತಿಭಟನಾಕಾರರು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ, ಅವರನ್ನು ಚದುರಿಸಲು ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿ ಅಶ್ರುವಾಯು ಶೆಲ್ ಮತ್ತು ಸ್ಪೋಕ್ ಬಾಂಬ್‌ಗಳನ್ನು ಹಾರಿಸಿದರು. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಭಾವಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮುಖ್ಯಮಂತ್ರಿಗಳ ಸಚಿವಾಲಯವು ಸೋಮವಾರ ರಾತ್ರಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಸಾರ್ವಜನಿಕರು ಸಂಯಮದಿಂದ ಇರಬೇಕು ಮತ್ತು ತನಿಖೆಯನ್ನು ನಿರ್ವಹಿಸಲು ಅಧಿಕಾರಿಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಇಬ್ಬರು ವಿದ್ಯಾರ್ಥಿಗಳ ಭಾವಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯದ ಜನರ ಇಚ್ಛೆಯಂತೆ ಈ ಪ್ರಕರಣವನ್ನು ಈಗಾಗಲೇ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂಬುದನ್ನು ಗಮನಿಸಬಹುದು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೇಂದ್ರ ಭದ್ರತಾ ಸಂಸ್ಥೆಗಳ ಸಹಯೋಗದೊಂದಿಗೆ ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಇವರಿಬ್ಬರ ನಾಪತ್ತೆಯ ಸುತ್ತಲಿನ ಸಂದರ್ಭಗಳನ್ನು ನಿರ್ಧರಿಸಲು ಮತ್ತು ಅವರನ್ನು ಹತ್ಯೆ ಮಾಡಿದವರನ್ನು ಗುರುತಿಸಲು ಸಂಸ್ಥೆಯು ಪೊಲೀಸರ ನೆರವನ್ನು ಕೋರಿದೆ.
ಏತನ್ಮಧ್ಯೆ, ರಾಜ್ಯ ಸರ್ಕಾರ ಬುಧವಾರದಿಂದ ಶುಕ್ರವಾರದವರೆಗೆ ಎಲ್ಲ ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಮೇ 3 ರಂದು ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೀಟಿ ಸಮುದಾಯದ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ “ಬುಡಕಟ್ಟು ಐಕಮತ್ಯ ಮೆರವಣಿಗೆ” ಆಯೋಜಿಸಿದಾಗ ಹಿಂಸಾಚಾರ ಭುಗಿಲೆದ್ದ ನಂತರ ಇಲ್ಲಿಯವರೆಗೂ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧವನ್ನು ಕೆಲ ತಾಸುಗಳ ಕಾಲ ನಿಲ್ಲಿಸಲು ಸಮರ್ಥರಾದ (?) ಮೋದಿ ಅವರಿಗೆ , ನಮ್ಮದೇ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಕೊನೆಗೊಳಿಸಲು ಏಕೆ ಸಾಧ್ಯವಾಗುತ್ತಿಲ್ಲ …?
Illiterate faku don’t even know now to restrict, that’s his specialty 🤣