ಒಡಿಶಾ: ಬೆಂಗಳೂರಿನಿಂದ ತೆರಳುತ್ತಿದ್ದ ಹೌರಾ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಢಿಕ್ಕಿ; 233 ಕ್ಕೂ ಹೆಚ್ಚು ಸಾವು, 900ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಇಂದು(ಜೂ 2) ಸಂಜೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ 233ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಕೋಲ್ಕತಾದಿಂದ ಬರುತ್ತಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿ ತಪ್ಪುತ್ತದೆ. ಹಳಿ ತಪ್ಪಿದ ನಂತರ ಒಂದೇ ಹಳಿಯ ಮೇಲೆ ಬರುತ್ತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ರೈಲು ಢಿಕ್ಕಿ ಹೊಡೆಯುತ್ತದೆ. ಢಿಕ್ಕಿ ಹೊಡೆದ ನಂತರ ಪಕ್ಕದ ಹಳಿ ಮೇಲೆ ಕೋರಮಂಡಲ್ ರೈಲಿನ ಬೋಗಿಗಳು ಬೀಳುತ್ತವೆ. ಆಗ ಇದೇ ಸಂದರ್ಭದಲ್ಲಿ ಬೋಗಿಗಳು ಬಿದ್ದ ಹಳಿಯ ಮೇಲೆ ಬರುತ್ತಿದ್ದ ಯಶವಂತಪುರ – ಹೌರಾ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ.

ಹಲವರು ರೈಲಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್) ರೈಲಿನೊಳಗೆ ಸಿಕ್ಕಿ ಬಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆ ಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.

ಮಾಧ್ಯಮಗಳ ಮಾಹಿತಿಯ ಪ್ರಕಾರ, ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಬೋಗಿಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು. ಸ್ಥಳೀಯರ ಮಾಹಿತಿ ಅನ್ವಯ ಈ ಬೋಗಿಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಕೋಲ್ಕತ್ತಾದಿಂದ ಚೆನ್ನೈಗೆ ತೆರಳುತ್ತಿತ್ತು.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ. ಪ್ರಸ್ತುತ ಸ್ಥಳಗದಲ್ಲಿಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್‌ಆರ್‌ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಯ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದು, “ನಮ್ಮ ಸರ್ಕಾರವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಮನ್ವಯ ಸಾಧಿಸುತ್ತಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಹಕರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ರಕ್ಷಣೆ, ಮರುಪಡೆಯುವಿಕೆ, ನೆರವು ಮತ್ತು ಸಹಾಯಕ್ಕಾಗಿ ತುರ್ತು ನಿಯಂತ್ರಣ ಕೊಠಡಿಗಳ ಜೊತೆ ಎಲ್ಲಾ ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ದುರಂತದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವಾರು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು...

ವಿಶೇಷಚೇತನ ಯೋಧರ ಹೊಸ ಪಿಂಚಣಿ ಯೋಜನೆ; ಮೋದಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಬಯಲು: ಖರ್ಗೆ

ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ...

ಮಧ್ಯಪ್ರದೇಶ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟಂಬಕ್ಕೊಂದು ಉದ್ಯೋಗ: ಸಿಎಂ ಚೌಹಾಣ್

ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ಚುನಾವಣೆ ನಡೆಯಲಿದೆ. ಅಲ್ಲಿ ಅಪರೇಷನ್ ಕಮಲಕ್ಕೆ...