ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

Date:

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ ‘ದೊಡ್ಡ ಪ್ರಮಾದ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಮೊಯ್ಲಿ, ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ಸೇರಿಸಿರುವುದರಿಂದ ರೈಲ್ವೆ ಇಲಾಖೆಯ ಮೇಲೆ ಹೆಚ್ಚಿನ ಗಮನ ಇಲ್ಲದಂತಾಗಿದೆ. ಹೀಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಕ್ರಮವನ್ನು ಪುನರ್‌ ಸ್ಥಾಪಿಸುವಂತೆ ಮೊಯ್ಲಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಬುಲೆಟ್‌ ರೈಲುಗಳ ಕುರಿತು ಮಾತನಾಡುತ್ತಿದೆ. ಆದರೆ ಈಗ ಇರುವ ವ್ಯವಸ್ಥೆಯಲ್ಲೇ ಹಲವಾರು ಸಮಸ್ಯೆಗಳಿವೆ. ಇಲಾಖೆಯನ್ನು ಆಧುನೀಕರಣಗೊಳಿಸದೆ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸದೆ ಹೈಸ್ಪೀಡ್ ರೈಲುಗಳತ್ತ ಗಮನ ಹರಿಸುವುದು ತರಾತುರಿಯ ಹೆಜ್ಜೆಯಾಗಿದೆ. ಮೂಲಸೌಕರ್ಯಗಳ ಸುಧಾರಣೆಗೆ ಸರ್ಕಾರ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಇದೇ ವೇಳೆ, ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅವಘಡದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜೀನಾಮೆ ನೀಡಬೇಕು ಎಂದು ಮೊಯ್ಲಿ ಒತ್ತಾಯಿಸಿದ್ದಾರೆ.

ಕಳೆದ ಶುಕ್ರವಾರ ಒಡಿಶಾದ ಬಾಲಾಸೋರ್‌ನಲ್ಲಿ, ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 278 ಜನರು ಮೃತಪಟ್ಟಿದ್ದರು ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...