ಚುನಾವಣಾ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ನನಗೆ ಅಚ್ಚರಿ ಉಂಟು ಮಾಡಿದೆ : ಶರದ್‌ ಪವಾರ್ ವ್ಯಂಗ್ಯ

Date:

Advertisements
  • ಪಂಢರಪುರದಲ್ಲಿ ಶರದ್‌ ಪವಾರ್‌ ಕರ್ನಾಟಕ ಚುನಾವಣೆ ಬಗ್ಗೆ ಮಾತು
  • ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ

ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಪ್ರಚಾರವನ್ನು ಲೇವಡಿ ಮಾಡಿದ್ದಾರೆ.

“ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ಮಾಡುತ್ತಿರುವುದು ನನಗೆ ಅಚ್ಚರಿ ಉಂಟು ಮಾಡಿದೆ” ಎಂದು ಪವಾರ್‌ ಟೀಕಿಸಿದ್ದಾರೆ.

ಮಹಾರಾಷ್ಟ್ರದ ಪಂಢರಪುರದಲ್ಲಿ ಭಾನುವಾರ (ಮೇ 7) ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶರದ್‌ ಪವಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೀಗೆ ಹೇಳಿದರು.

Advertisements

ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರನ ಸೃಷ್ಟಿಸುತ್ತದೆ. ಅದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಶರದ್‌ ಪವಾರ್‌ ಹೇಳಿದರು.

“ಚುನಾವಣೆಗೆ ಸ್ಪರ್ಧಿಸುವ ವೇಳೆ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತೆಯ ರಕ್ಷಣೆಗೆ ಪ್ರಮಾಣವಚನ ಸ್ವೀಕರಿಸುತ್ತೇವೆ. ಆದ್ದರಿಂದ ಧರ್ಮ ಅಥವಾ ಧಾರ್ಮಿಕ ವಿಚಾರ ಕೈಗೆತ್ತಿಕೊಳ್ಳುವುದು ಸಮಂಜಸವಲ್ಲ” ಎಂದು ಪವಾರ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇ‍ಶ | ಬಿಜೆಪಿ ನಾಯಕ ದೀಪಕ್‌ ಜೋಶಿ ಕಾಂಗ್ರೆಸ್‌ ಸೇರ್ಪಡೆ

“ಮೋದಿ ಅವರ ಧಾರ್ಮಿಕ ಘೋಷಣೆಗಳು ಫಲಿಸುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಈ ಬಾರಿ ಅಧಿಕಾರ ಪಡೆಯುತ್ತದೆ” ಎಂದು ಶರದ್‌ ಪವಾರ್‌ ಸುದ್ದಿಗಾರರಿಗೆ ತಿಳಿಸಿದರು.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ನಡೆಯಲಿದೆ. 13ಕ್ಕೆ ಫಲಿತಾಂಶ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X