ಸಹಜೀವನ ಸಂಗಾತಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

Date:

ವ್ಯಕ್ತಿಯೊಬ್ಬ ತನ್ನ ಸಹ ಜೀವನ ಸಂಗಾತಿ ಮಹಿಳೆಯನ್ನು ಕೊಂದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

56 ವರ್ಷದ ಆರೋಪಿ ಮನೋಜ್ ಸಹಾನಿ ಎಂಬಾತ 32 ವರ್ಷದ ಸರಸ್ವತಿ ವೈದ್ಯ ಮಹಿಳೆಯನ್ನು ಬರ್ಬರವಾಗಿ ಕೊಂದಿದ್ದಾನೆ. ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‌ನಲ್ಲಿ ಇವರಿಬ್ಬರು ವಾಸವಾಗಿದ್ದರು.

3–4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಮರ ಕತ್ತರಿಸುವ ಯಂತ್ರವನ್ನು ಖರೀದಿಸಿ ಆಕೆಯ ದೇಹವನ್ನು 12 ತುಂಡು ಮಾಡಿದ್ದ. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವುದಕ್ಕಾಗಿ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಆರ್‌ಬಿಐ ಹಣಕಾಸು ನೀತಿ ಸಭೆ ಮುಕ್ತಾಯ; ರೆಪೊ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ

ಫ್ಲಾಟ್‌ನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸರಸ್ವತಿ ಅವರ ಕೊಳೆತ ಮೃತದೇಹ ಕಂಡುಬಂದಿದೆ.

“ಆರೋಪಿ ಮತ್ತು ಹತ್ಯೆಯಾದ ಮಹಿಳೆ ಸಹಜೀವನ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ” ಎಂದು ಮುಂಬೈನ ಉಪ ಪೊಲೀಸ್ ಆಯುಕ್ತ ಜಯಂತ್ ಬಜ್ಬಲೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...