ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

Date:

Advertisements

ಮುಸ್ಲಿಂ ಯುವಕನೊಬ್ಬನನ್ನು ಮೊಬೈಲ್ ಕಳ್ಳನೆಂದು ಶಂಕಿಸಿ ಆತನನ್ನು ಮರಕ್ಕೆ ಕಟ್ಟಿ, ಹಲ್ಲೆ ನಡೆಸಿ ‘ಜೈ ಶ್ರೀರಾಮ್’ ಎಂದು ಹೇಳುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.

ಜೂ.13 ರಂದು ಸಾಹಿಲ್‌ ಎಂಬುವರು ತನ್ನ ಗ್ರಾಮದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಮೂವರು ಯುವಕರು ಬಂದು ಆತನನ್ನು ಬಲವಂತವಾಗಿ ತಮ್ಮ ಬೈಕ್‌ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೊಬೈಲ್‌ ಕಳವಿನ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾನು ಮೊಬೈಲ್‌ ಕದ್ದಿಲ್ಲ ಎಂದು ಹೇಳಿದಾಗ ಸಾಹಿಲ್‌ನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸುವುದರ ಜೊತೆ ತಲೆಯನ್ನು ಬೋಳಿಸಿದ್ದಾರೆ. ನಂತರ ಬಲವಂತವಾಗಿ “ಜೈ ಶ್ರೀರಾಮ್” ಹೇಳುವಂತೆ ಹಲ್ಲೆ ಮಾಡಿದ್ದಾರೆ.

ಸಾಹಿಲ್‌ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡು ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಆದರೆ ಪ್ರಕರಣದ ಬಗ್ಗೆ ಮಾಹಿತಿಯನ್ನು ತಿಳಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು, ಮೊಬೈಲ್‌ ಕಳ್ಳನೆಂದು ಸಾಹಿಲ್‌ ಅವರನ್ನೇ ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

ಈ ಬಗ್ಗೆ ಜೂನ್ 17 ರಂದು, ಸಾಹಿಲ್‌ನ ಪೋಷಕರು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅವರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಆನಂತರ ತನಿಖೆ ನಡೆಸಿದ ಬಳಿಕ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಕಳ್ಳತನದ ಶಂಕೆಯಲ್ಲಿ ಅದೇ ಗ್ರಾಮದ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂತ್ರಸ್ತನ ಕುಟುಂಬದವರು ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಎಎಸ್‌ಪಿ ಎಸ್ ಎನ್ ತಿವಾರಿ ತಿಳಿಸಿದ್ದಾರೆ.

‌“ಈ ಮೊದಲು ಪೊಲೀಸರು ತಮ್ಮನ್ನು ಬೆದರಿಸಿದ್ದು ಮಾತ್ರವಲ್ಲದೆ ತಮ್ಮ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದರು. ಅವರು ಶ್ರೀಮಂತ ಜನರು. ನಾವು ಬಡವರು. ಆರೋಪಿಗಳು ಇನ್ನೂ ಬೆದರಿಕೆ ಹಾಕುತ್ತಲೇ ಇದ್ದಾರೆ” ಎಂದು ಎಂದು ಸಾಹಿಲ್‌ನ ತಾಯಿ ನೂರ್ ಬಾನೋ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X