ಗುಜರಾತ್ | ಉದ್ಘಾಟನೆಗೂ ಮುನ್ನವೇ ಮುರಿದು ಬಿತ್ತು ಸೇತುವೆ

Date:

ಹೊಸದಾಗಿ ನಿರ್ಮಾಣವಾಗಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ಗುಜರಾತ್‌ ರಾಜ್ಯದ ತಾಪಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

- Advertisement -

ಮಿಂಡೋಲಾ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಇನ್ನೂ ಉದ್ಘಾಟನೆಯಾಗಿರಲಿಲ್ಲ. ವಾಲೋಡ್ ತಾಲ್ಲೂಕಿನ ಮಾಯ್‌ಪುರ್ ಗ್ರಾಮ ಹಾಗೂ ವ್ಯಾರಾ ತಾಲ್ಲೂಕಿನ ದೇಹ್‌ಗಮಾ ಗ್ರಾಮಗಳ ನಡುವಿನ ಕೊಂಡಿಯಾಗಿದ್ದ ಸೇತುವೆಯು ಮಧ್ಯಭಾಗವು ಮಿಂಡೋಲಾ ನದಿಯೊಳಗೆ ಮುರಿದು ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತಾಪಿ ಜಿಲ್ಲಾಧಿಕಾರಿ ವಿಪಿನ್ ಗಾರ್ಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಸೇತುವೆಯು ಇನ್ನೂ ಉದ್ಘಾಟನೆಯಾಗದ ಕಾರಣ ಸಂಚಾರಕ್ಕೆ ಮುಕ್ತಗೊಳಿಸಿರಲಿಲ್ಲ. ಸೇತುವೆಯ ಕೆಲವು ಭಾಗಗಳು ಕುಸಿದುಬಿದ್ದಿವೆ. ಈ ಘಟನೆಯ ತನಿಖೆಗೆ ಆದೇಶ ನೀಡಲಾಗಿದ್ದು, ಅದರ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಗುಣಮಟ್ಟದ ಬಗ್ಗೆಯೂ ಪರಿಶೀಲನೆ ನಡೆಸಲು ಸೂಚಿಸಲಾಗಿದೆ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷಗಿರಿ; ಸರ್ಕಾರಕ್ಕೆ ಇರಲಿ ಎಚ್ಚರ

ಸ್ಥಳೀಯರು ಹೇಳುವ ಪ್ರಕಾರ, ಇದೇ ಜಾಗದಲ್ಲಿ ಹಿಂದೆಯೂ ಸೇತುವೆಯೊಂದು ಇತ್ತು. ಆದರೆ, ಅದು ಮಳೆಗಾಲದಲ್ಲಿ ನೀರಿನಲ್ಲಿ ಮುಳುಗಡೆಯಾಗುತ್ತಿತ್ತು. ಅದರಿಂದ ಜನ ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಸರ್ಕಾರಕ್ಕೆ ಹಲವು ಬಾರಿ ಜನ ದೂರು ನೀಡಿದ ಮೇಲೆ, 2021ರಲ್ಲಿ ಹೊಸ ಸೇತುವೆಯ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಸೇತುವೆ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಉದ್ಘಾಟನೆ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲು ತೀರ್ಮಾನಿಸಲಾಗಿತ್ತು. ಅಷ್ಟರಲ್ಲಿಯೇ ಅನಾಹುತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊರ್ಬಿ ದುರಂತ

ಗುಜರಾತ್ ರಾಜ್ಯದ ಮೊರ್ಬಿ ಜಿಲ್ಲೆಯಲ್ಲಿ 2022ರ ಅಕ್ಟೋಬರ್ 30ರಂದು ತೂಗುಸೇತುವೆ ಕುಸಿದು 135ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಸೇತುವೆಯ ದುರಸ್ತಿ ಮತ್ತು ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿತ್ತು. ಸರ್ಕಾರ ಮತ್ತು ಖಾಸಗಿ ಸಂಸ್ಥೆಯ ತಪ್ಪಿನಿಂದ ದುರಂತ ಸಂಭವಿಸಿದೆ ಎನ್ನುವ ಆರೋಪಗಳು ವ್ಯಕ್ತವಾಗಿದ್ದವು.

ಇದೀಗ ಹೊಸದಾಗಿ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಮುರಿದು ಬಿದ್ದಿರುವುದು ‘ಗುಜರಾತ್ ಮಾಡೆಲ್‌’ನ ಫಲ ಎಂದು ನೆಟ್ಟಿಗರು ವ್ಯಂಗ್ಯ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...