ತೃತೀಯ ರಂಗಕ್ಕೆ ಬೆಂಬಲವಿಲ್ಲ;  ಪ್ರಧಾನಿ ಮೋದಿ ಭೇಟಿ ಬಳಿಕ ನವೀನ್‌ ಪಟ್ನಾಯಕ್‌ ಸ್ಪಷ್ಟನೆ

Date:

ʻಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಜೊತೆ ಸಮಾನ ಅಂತರ ಕಾಯ್ದುಕೊಳ್ಳುವ ನಮ್ಮ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಆ ಮೂಲಕ ಬಿಜು ಜನತಾದಳ ಪಕ್ಷವು , ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಜತೆ ಕೈಜೋಡಿಸುವ ಸಾಧ್ಯತೆಯನ್ನು ಪಟ್ನಾಯಕ್ ತಳ್ಳಿಹಾಕಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನವೀನ್‌ ಪಟ್ನಾಯಕ್‌ ಮಾತುಕತೆ ನಡೆಸಿದ್ದರು. ಭೇಟಿಯ ಬಳಿಕ ಮಾತನಾಡಿದ ಒಡಿಶಾ ಸಿಎಂ, ತೃತೀಯ ರಂಗ ಅಥವಾ ತಾವು ಯಾವುದೇ ರಾಜಕೀಯ ಬಣದ ಜತೆ ತಾವು ಸೇರಿಕೊಳ್ಳುವುದಿಲ್ಲʼ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುವ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಪುರಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರಧಾನಿ ಅವರು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.  ಇದರ ಹೊರತಾಗಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲʼ ಎಂದು ಪಟ್ನಾಯಕ್ ಹೇಳಿದ್ದಾರೆ.

ಇದರೊಂದಿಗೆ, ಮುಂದಿನ ಲೋಕಸಭೆ ಚುನಾವಣೆಗೂ ಮುನ್ನ, ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಪ್ರಯತ್ನಕ್ಕೆ ಆರಂಭದಲ್ಲೇ ಹಿನ್ನಡೆಯಾಗಿದೆ.  

ಈ ಸುದ್ದಿ ಓದಿದ್ದೀರಾ?: ಗಟ್ಟಿಗಿತ್ತಿ ಮಮತಾ ಬ್ಯಾನರ್ಜಿ ಭಾರತದ ಪ್ರಧಾನಿಯಾಗಬೇಕು: ಸುಬ್ರಮಣಿಯನ್ ಸ್ವಾಮಿ

ಕೆಲ ದಿನಗಳ ಹಿಂದೆ ನಿತೀಶ್ ಕುಮಾರ್, ಒಡಿಶಾದ ಭುವನೇಶ್ವರದಲ್ಲಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಆದರೆ ಸಭೆಯ ಬಳಿಕ ಉಭಯ ಮುಖ್ಯಮಂತ್ರಿಗಳು ʻಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲʼ ಎಂದು ಪ್ರತಿಕ್ರಿಯಿಸಿದ್ದರು.

ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಜೊತೆಗೂಡಿ ನಿತೀಶ್‌ ಕುಮಾರ್‌, ಗುರುವಾರ ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ನಿತೀಶ್ ಕುಮಾರ್ ಈ ಹಿಂದೆ ಲಕ್ನೋದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವಾರು ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಮತ್ತು ಸಿಪಿಐ ನಾಯಕ ಡಿ ರಾಜಾ ಅವರನ್ನು ಭೇಟಿ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ʼಈ ದಿನʼ ಸಮೀಕ್ಷೆ | ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ; ಮೋದಿಯ ನಿಜಮುಖ ಅರಿತ ಜನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ʼಈ ದಿನʼ ಸಮೀಕ್ಷೆ | “ನಾ ಖಾವೂಂಗ, ಖಾನೇದೂಂಗ” ಎನ್ನುತ್ತಲೇ ಭ್ರಷ್ಟಾಚಾರ ಮಾಡಿದ ಮೋದಿ ಸರ್ಕಾರ

ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ...