ದೇವಸ್ಥಾನದಿಂದ ಕದ್ದ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ!

Date:

  • 2014ರ ಮೇ ತಿಂಗಳಿನಲ್ಲಿ ಕಳುವಾಗಿದ್ದ ಆಭರಣ
  • ಒಡಿಶಾದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ದೇವಸ್ಥಾನ

ದೇವಸ್ಥಾನದಿಂದ ಕಳವು ಮಾಡಿದ್ದ ಆಭರಣಗಳನ್ನು ʻಅನಾಮಧೇಯ ಕಳ್ಳ’ನೊಬ್ಬ 9 ವರ್ಷಗಳ ಬಳಿಕ ಹಿಂತಿರುಗಿಸಿರುವ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳು ಕಳುವಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು ₹4 ಲಕ್ಷ ಮೌಲ್ಯದ ಬೆಳ್ಳಿಯ ಆಭರಣಗಳು ಕಳುವಾಗಿತ್ತು.

ಆದರೆ ಬರೋಬ್ಬರಿ 9 ವರ್ಷಗಳ ಬಳಿಕ ಕಳವುಗೈಯ್ದಿದ್ದ ಆಭರಣಗಳನ್ನು ದೇವಸ್ಥಾನಕ್ಕೆ ಹಿಂತಿರುಗಿಸಿರುವ ಕಳ್ಳ, ಆಭರಣಗಳ ಬ್ಯಾಗ್‌ ಜೊತೆ ಕ್ಷಮಾಪಣಾ ಪತ್ರವನ್ನೂ ಬರೆದಿಟ್ಟು ತೆರಳಿದ್ದಾನೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻದೇವಸ್ಥಾನದಲ್ಲಿ ಯಜ್ಞ ನಡೆಯುತ್ತಿದ್ದಾಗ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದೆ. ಆದರೆ ನಂತರದ ದಿನಗಳಲ್ಲಿ ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದೆ. ಆದ್ದರಿಂದ, 9 ವರ್ಷಗಳ ನಂತರ ನಾನು ದೇವರ ಮುಂದೆ ಶರಣಾಗಲು ಮತ್ತು ಆಭರಣಗಳನ್ನು ಹಿಂದಿರುಗಿಸಲು ನಿರ್ಧರಿಸಿದೆ. ನಾನು  ಹೆಸರು, ವಿಳಾಸ ಅಥವಾ ಗ್ರಾಮವನ್ನು ಉಲ್ಲೇಖಿಸುತ್ತಿಲ್ಲ. ನನ್ನ ಕೃತ್ಯಕ್ಕೆ ವಿಷಾದಿಸುತ್ತೇನೆ. ಕ್ಷಮಿಸಿʼ ಎಂದು ಪತ್ರದಲ್ಲಿ ಬರೆದಿದ್ದಾನೆ.

ಬೆಳ್ಳಿ ಆಭರಣಗಳಿದ್ದ ಬ್ಯಾಗ್‌  ಜೊತೆಗ ದೇಣಿಗೆಯಾಗಿ 201 ರೂಪಾಯಿ ಮತ್ತು ಕಳ್ಳತನಕ್ಕೆ ಪ್ರಾಯಶ್ಚಿತವಾಗಿ  100 ದಂಡ ಸೇರಿದಂತೆ ಒಟ್ಟು 301 ರೂಪಾಯಿಯನ್ನು  ʻಅನಾಮಧೇಯ ಕಳ್ಳʼ ಪತ್ರದ ಜೊತೆಗಿರಿಸಿದ್ದಾನೆ ಎಂದು ದೇವಸ್ಥಾನದ ಅರ್ಚಕ ಕೈಲಾಶ್ ಪಾಂಡಾ  ತಿಳಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ...

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...