ತ್ರಿವಳಿ ರೈಲು ದುರಂತ| ಘಟನೆ ಸಿಬಿಐ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ರೈಲ್ವೆ ಸಚಿವ

Date:

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್) ದೋಷ ಹಾಗೂ ಸ್ಟೇಷನ್ ಮಾಸ್ಟರ್‌ ಕೊಠಡಿಯಲ್ಲಿ ಸರಿಯಾದ ಸಿಗ್ನಲ್ ನೀಡಲು ವಿಫಲವಾಗಿರುವುದು ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರೈಲ್ವೆ ದುರಂತವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಅಪಘಾತದ ಸ್ವರೂಪ, ಚಾಲ್ತಿಯಲ್ಲಿರುವ ಸಂದರ್ಭಗಳು ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಗಣಿಸಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ರೈಲ್ವೆ ಮಂಡಳಿಯು ಶಿಫಾರಸು ಮಾಡಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ನಮಗೆ ಕಾರಣ ತಿಳಿದಿದೆ, ಆದರೆ ಇದು ಗೌಪ್ಯವಾದ ಮಾಹಿತಿಯಾಗಿರುವುದರಿಂದ ನಾನು ಏನನ್ನಾದರೂ ಹೇಳಿದರೆ ತಪ್ಪಾಗುತ್ತದೆ. ಸದ್ಯ ರೈಲ್ವೆ ಸುರಕ್ಷತಾ ಆಯೋಗ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವಿಚಾರಣೆ ಪೂರ್ಣಗೊಳಿಸಿದೆ ಮತ್ತು ವಿವರಗಳೊಂದಿಗೆ ತನಿಖೆಯ ವರದಿಯನ್ನು ಸಲ್ಲಿಸಲಿದೆ. ತನಿಖಾಧಿಕಾರಿಗಳಿಂದಲೇ ಮಾಹಿತಿ ಹೊರಬರಲಿ” ಎಂದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾತನಾಡಿದ ರೈಲ್ವೆ ಸಚಿವರು, “ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಟ್ರ್ಯಾಕ್‌ಗೆ ಸಂಬಂಧಿಸಿದ ಕೆಲಸ ಮುಗಿದಿದೆ ಮತ್ತು ಓವರ್‌ಹೆಡ್ ವೈರಿಂಗ್ ಕೆಲಸ ನಡೆಯುತ್ತಿದೆ. ಗಾಯಾಳುಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

“ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಭುವನೇಶ್ವರದಿಂದ ಸುಮಾರು 180 ಕಿಮೀ ದೂರದಲ್ಲಿರುವ ಬಹನಾಗಾ ನಿಲ್ದಾಣದಿಂದ ಸುಮಾರು 100 ಮೀಟರ್ ದೂರದಲ್ಲಿ ಲೂಪ್‌ಲೈನ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರೈಲಿನ ಕನಿಷ್ಠ 12 ಬೋಗಿಗಳು ಮಗುಜಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಇದೇ ವೇಳೆ ಪಕ್ಕದ ಟ್ರ್ಯಾಕ್‌ನಲ್ಲಿ ಬರುತ್ತಿದ್ದ ಬೆಂಗಳೂರು – ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಚದುರಿದ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ” ಎಂದು ಸಚಿವರು ತಿಳಿಸಿದ್ದಾರೆ.

ಬಾಲಸೋರ್, ಕಟಕ್ ಮತ್ತು ಭುವನೇಶ್ವರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳಿಗೆ ಒಡಿಶಾ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಎಲ್ಲ ನೆರವು ನೀಡುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ, ಹಗಲು-ರಾತ್ರಿ ರೋಗಿಗಳನ್ನು ನೋಡಿಕೊಳ್ಳುವ ವೈದ್ಯರ ತಂಡಗಳಿವೆ. ಮೃತರ ಕುಟುಂಬದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ರೈಲ್ವೆ ಸಚಿವರು ತಿಳಿಸಿದರು.

ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ವ್ಯವಸ್ಥೆ ಎಂದರೇನು?

ಸಿಗ್ನಲ್​ಗಳು ಮತ್ತು ಹಳಿ​ಗಳನ್ನು ನಿಯಂತ್ರಿಸುವ ಮೂಲಕ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಎಂದು ಕರೆಯಲಾಗುತ್ತದೆ. ಇದು ಎಲೆಕ್ಟ್ರಾನಿಕ್ ಕಂಟ್ರೋಲ್ ಸಿಸ್ಟಂ ಮತ್ತು ಕಂಪ್ಯೂಟರ್​ ಸಹಾಯದಿಂದ ರೈಲುಗಳ ಚಲನೆಯ ಮೇಲೆ ನಿಗಾ ವಹಿಸುತ್ತದೆ. ಮಾರ್ಗವು ಸುರಕ್ಷಿತವೆಂದು ಸಾಬೀತುಪಡಿಸದ ಹೊರತು ಯಾವುದೇ ರೈಲು ಮುಂದುವರಿಯಲು ಈ ವ್ಯವಸ್ಥೆ ಬಿಡುವುದಿಲ್ಲ. ಆದರೆ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ದೋಷದಿಂದಾಗಿ ಅಪಘಾತ ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶ ಬಿಡುವಂತೆ ನೀಡಿದ್ದ ನೋಟಿಸ್‌ಗೆ ತಡೆ: ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ರಿಲೀಫ್

​ಅಕ್ಟೋಬರ್ 28ರೊಳಗೆ (ನಾಳೆ) ಭಾರತ ತೊರೆಯುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ...