ಮೂರು ವರ್ಷಗಳ ನಂತರ ಮೆಹಬೂಬಾ ಮುಫ್ತಿಗೆ ಪಾಸ್‌ಪೋರ್ಟ್‌ ನೀಡಿಕೆ

Date:

  • ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದ ಮೆಹಬೂಬಾ ಮುಫ್ತಿ
  • ಜಮ್ಮು- ಕಾಶ್ಮೀರ ಹೈಕೋರ್ಟ್‌ನಲ್ಲಿ ಮೆಹಬೂಬಾ ಪುತ್ರಿ ಅರ್ಜಿ

ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ 10 ವರ್ಷಗಳ ಅವಧಿಯ ಮಾನ್ಯತೆಯೊಂದಿಗೆ ಪಾಸ್‌ಪೋರ್ಟ್‌ ಅನ್ನು ನೀಡಲಾಗಿದೆ ಎಂದು ಶ್ರೀನಗರದ ಸ್ಥಳೀಯ ಮಾಧ್ಯಮಗಳು ಭಾನುವಾರ (ಜೂನ್‌ 4) ವರದಿ ಮಾಡಿವೆ.

ದೆಹಲಿ ಹೈಕೋರ್ಟ್‌ನಲ್ಲಿಯ ಸುದೀರ್ಘ ಕಾನೂನು ಹೋರಾಟದ ನಂತರ ಮೆಹಬೂಬಾ ಅವರಿಗೆ ಪಾಸ್‌ಪೋರ್ಟ್‌ ಅನ್ನು ತಲುಪಿಸಲಾಗಿದೆ ಎಂದು ವರದಿ ಹೇಳಿದೆ.

ಮೆಹಬೂಬಾ ಮುಫ್ತಿ ಅವರ ಪ್ರಯಾಣದ ದಾಖಲೆಯು 2019ರಲ್ಲಿ ಅವಧಿ ಪೂರ್ಣಗೊಂಡಿತ್ತು. ಈ ಹಿನ್ನೆಲೆ ಅವರು ಪ್ರಯಾಣದ ದಾಖಲೆಯ ನವೀಕರಣದ ನಿರೀಕ್ಷೆಯಲ್ಲಿದ್ದರು.

ಮೆಹಬೂಬಾ ಅವರಿಗೆ ನಿರ್ದಿಷ್ಟ ಅವಧಿಯ ಪ್ರಯಾಣದ ದಾಖಲೆ ನೀಡುವ ಪಾಸ್‌ಪೋರ್ಟ್‌ ಕಚೇರಿ ನಿರ್ಧಾರ ಪ್ರಶ್ನಿಸಿ ಅವರ ಪುತ್ರಿ ಇಲ್ತಿಜಾ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಇನ್ನೂ ಎರಡು ದಿನ ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದೆ.

“2019ರಲ್ಲಿ ವಿಭಜನೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ಮುಖ್ಯಮಂತ್ರಿ ಆಗಿದ್ದ ಮೆಹಬೂಬಾ ಅವರಿಗೆ ಪಾಸ್‌ಪೋರ್ಟ್‌ ನೀಡಲಾಗಿದೆ. ಇದು 2023ರ ಜೂನ್‌ 1 ರಿಂದ 2033ರ ಮೇ 31ರವರೆಗೆ ಮಾನ್ಯತೆ ಹೊಂದಿರುತ್ತದೆ” ಎಂದು ಪಾಸ್‌ಪೋರ್ಟ್‌ ಕಚೇರಿ ಹೇಳಿದೆ.

ಮೆಹಬೂಬಾ ಅವರಿಗೆ ನೂತನ ಪಾಸ್‌ಪೋರ್ಟ್‌ ನೀಡುವ ಬಗ್ಗೆ ಮೂರು ತಿಂಗಳ ಒಳಗೆ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್‌ ಅವರು ಮಾರ್ಚ್ನಲ್ಲಿ ನೀಡಿದ ಆದೇಶದಲ್ಲಿ ಪಾಸ್‌ಪೋರ್ಟ್‌ ಪ್ರಾಧಿಕಾರಕ್ಕೆ ಸೂಚಿಸಿದ್ದರು.

ಇದಕ್ಕೂ ಮುನ್ನ ಮೆಹಬೂಬಾ ಅವರು ತಮಗೆ ಹೊಸ ಪಾಸ್‌ಪೋರ್ಟ್‌ ನೀಡುವ ಬಗ್ಗೆ ಪಾಸ್‌ಪೊರ್ಟ್‌ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಡು ಬಡತನದಲ್ಲಿಯೂ 10ನೇ ತರಗತಿ ಪಾಸು ಮಾಡಿದ ಅಮ್ಮ-ಮಗ

ಮೆಹಬೂಬಾ ಮುಫ್ತಿ ಅವರು ತಮ್ಮ ಅರ್ಜಿಯಲ್ಲಿ, ಜ್ಞಾಪನೆಗಳ ಹೊರತಾಗಿಯೂ ತಮ್ಮ ಹೊಸ ಪಾಸ್‌ಪೋರ್ಟ್‌ ವಿತರಣೆಗೆ ಗಣನೀಯ ವಿಳಂಬ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಮೆಹಬೂಬಾ ಅವರ ಹೊಸ ಪಾಸ್‌ಪೋರ್ಟ್ ಕುರಿತು ಮರುಪರಿಶೀಲನೆ ನಡೆಸುವಂತೆ ಜಮ್ಮು ಮತ್ತು ಕಾಶ್ಮೀರದ ಪಾಸ್‌ಪೋರ್ಟ್‌ ಕಚೇರಿಗೆ ಸೂಚಿಸಿ ಮಾರ್ಚ್ 2 ರಂದು ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...