ನೂತನ ಸಂಸತ್‌ ಭವನ | ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಂದ ಉದ್ಘಾಟನೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

Date:

ನೂತನ ಸಂಸತ್‌ ಭವನ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ (ಮೇ 25) ಅರ್ಜಿಯೊಂದು ಸಲ್ಲಿಕೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತು ಭವನವನ್ನು ಉದ್ಘಾಟಿಸದಂತೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ವಕೀಲ ಸಿ ಆರ್‌ ಜಯ ಸುಕಿನ್‌ ಅರ್ಜಿ ಸಲ್ಲಿಸಿದ್ದಾರೆ. ಹೊಸ ಸಂಸತ್‌ ಭವನದ ಉದ್ಘಾಟನಾ ಸಮಾರಂಭದಿಂದ ರಾಷ್ಟ್ರಪತಿ ಅವರನ್ನು ಹೊರಗಿಡುವ ಮೂಲಕ ಕೇಂದ್ರ ಸರ್ಕಾರ ಭಾರತದ ಸಂವಿಧಾನವನ್ನು ಉಲ್ಲಂಘಿಸಿದೆ. ಅದರ ಬಗ್ಗೆ ಅಗೌರವ ತೋರಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಸೇರಿದಂತೆ 19 ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್‌ ಭವನದ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಿಸಿವೆ.

ಕಾಂಗ್ರೆಸ್‌ ಸೇರಿ ಟಿಎಂಸಿ, ಎಸ್‌ಪಿ, ಎಎಪಿ ಮೊದಲಾದ ಪಕ್ಷಗಳು ಈ ಕುರಿತು ಬುಧವಾರ ಜಂಟಿ ಹೇಳಿಕೆ ಹೊರಡಿಸಿದ್ದವು.

ಈ ಸುದ್ದಿ ಓದಿದ್ದೀರಾ? ಅಮೆರಿಕದ ಶ್ವೇತಭವನದ​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ಹಿಟ್ಲರ್ ಅಭಿಮಾನಿ ಬಂಧನ

ನೂತನ ಸಂಸತ್ತು ಭವನ ಕಟ್ಟಡದ ಉದ್ಘಾಟನೆಯನ್ನು ಮೇ 28ರಂದು ನಿಗದಿಪಡಿಸಲಾಗಿದೆ. ಪ್ರಧಾನಿ ಮೋದಿ ಅವರು ಸಂಸತ್‌ ಭವನ ಉದ್ಘಾಟಿಸಲಿದ್ದಾರೆ.

ಕಳೆದ ವಾರ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರು ಪ್ರಧಾನಿ ಮೋದಿಗೆ ಹೊಸ ಸಂಸತ್‌ ಭವನದ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...