ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ಹುಟ್ಟುಹಬ್ಬದ ಸಂಭ್ರಮ. ಅವರು ಇಂದು (ಸೆ.17) 72 ವರ್ಷಗಳನ್ನು ಪೂರೈಸಿ 73ನೇ ವರ್ಷಕ್ಕೆ ಕಾಲಿರಿಸಿದ್ದಾರೆ.
ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ಮೋದಿಯವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಶುಭಾಶಯಗಳನ್ನು ಕೋರಿದರು.
ಮೋದಿಯವರಿಗೆ ಶುಭ ಹಾರೈಕೆ ತಿಳಿಸಿದ ರಾಷ್ಟ್ರಪತಿಯವರು, ‘ಮೋದಿಯವರು ತಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ್ ಕಾಲ’ದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಅಭಿವೃದ್ಧಿಗೆ ದಾರಿ ಮಾಡಿಕೊಡಲಿ’ ಎಂದು ಹಾರೈಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದೀಜಿ ಅವರಿಗೆ ಅವರ ಜನ್ಮದಿನದಂದು ನನ್ನ ಶುಭಾಶಯಗಳು. ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಹೊಂದಲಿ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ಶುಭಾಶಯ ಕೋರಿದ್ದಾರೆ.
ಎಕ್ಸ್‌ನಲ್ಲಿ ಪ್ರಧಾನಿ ಜನ್ಮ ದಿನದ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು’ ಎಂದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಗಣ್ಯರು, ಸೆಲಬ್ರಿಟಿಗಳು, ವಿದೇಶಿ ಗಣ್ಯರು ಸೇರಿದಂತೆ ಅನೇಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಕೋರುತ್ತಿದ್ದಾರೆ.
ಮೋದಿಯವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿಯು, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.