ಉತ್ತರ ಪ್ರದೇಶ | ದೇವಸ್ಥಾನದ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರ ಬಂಧನ

Date:

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಬರಾಲ್ ಗ್ರಾಮದಲ್ಲಿ ದೇವಸ್ಥಾನಗಳಿಗೆ ನುಗ್ಗಿ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ʻಹರೀಶ್ ಶರ್ಮಾ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಗೆ ಸ್ನೇಹಿತರಾದ ಶಿವಂ, ಕೇಶವ್, ಅಜಯ್  ಸಾಥ್‌ ನೀಡಿದ್ದಾರೆʼ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೇ 30ರಂದು ರಾತ್ರಿ, ಬುಲಂದ್‌ಶಹರ್ ಜಿಲ್ಲೆಯ ಬರಾಲ್ ಗ್ರಾಮದಲ್ಲಿನ ನಾಲ್ಕು ಹಿಂದೂ ದೇವಾಲಯಗಳಿಗೆ ನುಗ್ಗಿದ್ದ ದುಷ್ಕರ್ಮಿಗಳು, 12ಕ್ಕೂ ಹೆಚ್ಚು ಮೂರ್ತಿಗಳನ್ನು ಧ್ವಂಸಗೊಳಿಸಿದ್ದರು. ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳೀಯ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ, ದೇವಾಲಯಗಳ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದುಷ್ಕರ್ಮಿಗಳ ಪತ್ತೆಗಾಗಿ ಐದು ತಂಡಗಳನ್ನು ರಚಿಸಿದ್ದ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸಿಸಿಟಿವಿ ದೃಶ್ಯಗಳ ನೆರವಿನಿಂದ, ಬರಾಲ್ ಗ್ರಾಮದ ನಿವಾಸಿ ಹರೀಶ್ ಶರ್ಮಾ ಎಂಬಾತನನ್ನು ಪೊಲೀಸರು ಮೊದಲು ಬಂಧಿಸಿದ್ದರು. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ದೇವಸ್ಥಾನಗಳಿಗೆ ದಾಳಿ ಮಾಡುವ ಕುರಿತು ಈತನ ಮನೆಯಲ್ಲೇ ಸ್ನೇಹಿತರ ಜೊತೆಗೂಡಿ ಚರ್ಚೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...