ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

Date:

  • ಭೂ ವಿಜ್ಞಾನ ಸಚಿವರಾಗಿ ಕಿರಣ್‌ ರಿಜಿಜು ಪ್ರಮಾಣ ವಚನ
  • ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ನೇಮಕ

ಕಿರಣ್‌ ರಿಜಿಜು ಅವರು ತಮ್ಮ ಕಾನೂನು ಖಾತೆ ಬದಲಾವಣೆ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಖಾತೆ ಬದಲಾವಣೆ ಮಾಡಿರುವುದು ಶಿಕ್ಷೆಯಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಭಾಗವಾಗಿದೆ” ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಹೇಳಿದ್ದಾರೆ.

ಸಂಪುಟದಲ್ಲಿ ಮಾಡಿದ ಪ್ರಮುಖ ಬದಲಾವಣೆ ಸಮಯದಲ್ಲಿ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಬದಲಾಯಿಸಲ್ಪಟ್ಟ ಒಂದು ದಿನದ ನಂತರ ಕಿರಣ್‌ ರಿಜಿಜು ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ಪೃಥ್ವಿ ಭವನದಲ್ಲಿ ಶುಕ್ರವಾರ (ಮೇ 19) ಬೆಳಗ್ಗೆ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಖಾತೆಯ ಬದಲಾವಣೆ ಸರ್ಕಾರದ ಕಾರ್ಯವಿಧಾನ ವಾಡಿಕೆಯ ಪ್ರಕ್ರಿಯೆಯಾಗಿದೆ ಎಂದು ರಿಜಿಜು ಉಲ್ಲೇಖಿಸಿದರು.

“ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಒಂದು ಭಾಗವೇ ಹೊರತು ನನಗೆ ನೀಡಿರುವ ಶಿಕ್ಷೆಯಲ್ಲ” ಎಂದು ಕಿರಣ್‌ ರಿಜಿಜು ಅವರು ಸ್ಪಷ್ಟಪಡಿಸಿದರು.

“ಖಾತೆ ಬದಲಾವಣೆಯು ವಾಡಿಕೆಯ ಪ್ರಕ್ರಿಯೆಯಾಗಿದೆ. ಯಾರಾದರೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ. ಪ್ರತಿಪಕ್ಷಗಳು ನನ್ನ ವಿರುದ್ಧ ಮಾತನಾಡುತ್ತವೆ. ನನಗೆ ಇದು ಹೊಸತಲ್ಲ” ಎಂದು ರಿಜಿಜು ಸುದ್ದಿಗಾರರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

ನೂತನ ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಲಾಯಿತು. ಕಿರಣ್‌ ರಿಜಿಜು ಅವರನ್ನು ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮುಂಚಿತವಾಗಿ ಗುರುವಾರ ನಡೆದ ಹಠಾತ್ ಸಂಪುಟ ಬದಲಾವಣೆಯಲ್ಲಿ ಬದಲಾಯಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...