ಪಂಜಾಬ್ | ಬಿಜೆಪಿ ನಾಯಕ ಬಲ್ವಿಂದರ್ ಗಿಲ್‌ ಮೇಲೆ ಗುಂಡಿನ ದಾಳಿ; ಅಪಾಯದಿಂದ ಪಾರು

Date:

  • ಅಮೃತಸರದ ನಿವಾಸದಲ್ಲಿ ಬಲ್ವಿಂದರ್ ಗಿಲ್ ಮೇಲೆ ದಾಳಿ
  • ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿರುವ ಪೊಲೀಸ್

ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲ್ವಿಂದರ್ ಗಿಲ್ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 16) ನಡೆದಿದೆ.

ಅಮೃತಸರದ ಜಂಡಿಯಾಲ ಗುರು ಪ್ರದೇಶದಲ್ಲಿರುವ ಬಲ್ವಿಂದರ್ ನಿವಾಸದಲ್ಲಿ ಈ ಘಟನೆ ನಡೆದಿದೆ. ಬಲ್ವಿಂದರ್ ಅವರು ಮನೆಯಲ್ಲಿ ಇರುವಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಮೇಲೆ ಗುಂಡು ಹಾರಿಸಿದ್ದಾನೆ.

ಇದರಿಂದ ಬಲ್ವಿಂದರ್ ಗಿಲ್ ಅವರ ಬಾಯಿಗೆ ಗಾಯವಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಬಲ್ವಿಂದರ್ ನಿವಾಸದ ಬಳಿ ಬಂದು ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಇದರಿಂದ ಬಲ್ವಿಂದರ್‌ ಬಾಯಿಗೆ ಗುಂಡು ತಗುಲಿದ್ದು ಅಪಾಯದಿಂದ ಪಾರಾಗಿದ್ದಾರೆ” ಎಂದು ಅಮೃತಸರ ಗ್ರಾಮಾಂತರ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಎಸ್‌ಪಿ) ಸತೇಂದರ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಬಿಐ ವಿಚಾರಣೆ ಗೌರವಿಸುತ್ತೇನೆ ಎಂದ ಅರವಿಂದ್‌ ಕೇಜ್ರಿವಾಲ್

“ಸದ್ಯ ಈ ಬಗ್ಗೆ ನಿವಾಸದ ಬಳಿಯಿರುವ ಸಿಸಿಟಿವಿಯನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ. ಬಲ್ವಿಂದರ್‌ ಮೇಲೆ ನಡೆದ ದಾಳಿಯಲ್ಲಿ ಒಬ್ಬನ ಪಾತ್ರ ಇದೆ ಎಂದು ಇದುವರೆಗೆ ಕಂಡು ಬಂದಿದೆ” ಎಂದು ಅವರು ಹೇಳಿದರು.

ಪೊಲೀಸರು ಅಪರಿಚಿತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 307 (ಕೊಲೆ ಯತ್ನ), ಮತ್ತಿತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ...

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ...

ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು...

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ...