ಮಾನಹಾನಿ ಪ್ರಕರಣ | ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್

Date:

  • ಮಲ್ಲಿಕಾರ್ಜುನ ಖರ್ಗೆ ಅವರಿಗೆ ₹100 ಕೋಟಿ ಮಾನಹಾನಿ ಪ್ರಕರಣದಲ್ಲಿ ಸಮನ್ಸ್
  • ಬಜರಂಗದಳ ಹಿಂದೂಸ್ತಾನ್ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ದೂರು

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್‌ ನ್ಯಾಯಾಲಯವೊಂದು ಸೋಮವಾರ (ಮೇ 15) ಸಮನ್ಸ್‌ ಜಾರಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಯುವ ಘಟಕ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ನೀಡಿರುವ ಹೇಳಿಕೆ ಸಂಬಂಧ ದಾಖಲಾದ ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ಹೀಗೆ ಮಾಡಿದೆ.

ಬಜರಂಗದಳ ಹಿಂದೂಸ್ತಾನ್ ಎಂಬ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಎಂಬುವರು ದಾಖಲಿಸಿದ ₹100 ಕೋಟಿ ಮಾನನಷ್ಟ ಪ್ರಕರಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್‌ನ ಸಂಗ್ರೂರ್ ಜಿಲ್ಲಾ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಸಿಮಿ ಮತ್ತು ಅಲ್-ಖೈದಾದಂತಹ ದೇಶ ವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಎಂದು ಅರ್ಜಿದಾರ ಹಿತೇಶ್ ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.

ಕಾಂಗ್ರೆಸ್ ನೀಡಿರುವ ಪ್ರಣಾಳಿಕೆಯಲ್ಲಿರುವ ಈ ಅಂಶ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಸಂಘಟನೆಗಳನ್ನು ನಿಷೇಧಿಸುವ ಭರವಸೆ ನೀಡಿದೆ ಎಂದು ಹಿತೇಶ್ ಆರೋಪಿಸಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟ ಹೆಸರಿನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನುಉತ್ತೇಜಿಸುವ ಬಜರಂಗದಳ, ಪಿಎಫ್ಐ ಅಥವಾ ಇತರೆ ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು.

ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುಂದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮಕ್ಕೆ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ತಿಳಿಸಿತ್ತು.

ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿ ರಾಜ್ಯದ ಬಿಜೆಪಿ ನಾಯಕರವರೆಗೆ ಎಲ್ಲರೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಜರಂಗ ಬಲಿ ಭಕ್ತರಿಗೆ ಬೀಗ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ. ಜೈ ಬಜರಂಗಬಲಿ ಎಂದು ಜಪಿಸಿ, ದೇವರು-ಧರ್ಮ ದುರುಪಯೋಗ ಪಡಿಸುವವರನ್ನು ಶಿಕ್ಷಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಗಳಲ್ಲಿ ಒತ್ತಾಯಿಸಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ | ಹಂಚಿ ಹೋದ ಮುಸ್ಲಿಂ ಮತಗಳಿಂದ ಬಿಜೆಪಿ ಜಯಭೇರಿ

ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್‌ ನಾಯಕರು ಕಾಂಗ್ರೆಸ್‌ ಪ್ರಣಾಳಿಕೆಯನ್ನು ಬೆಂಬಲಿಸಿದ್ದರು. ಅಲ್ಲದೆ ರಾಜ್ಯದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 135 ಸ್ಥಾನಗಳ ಭರ್ಜರಿ ಗೆಲುವಿನ ಬಳಿಕ ಕಾಂಗ್ರೆಸ್, ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಸಂಘಟನೆಗಳು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ನಿಷೇಧಿಸುವಂತಹ ಅಧಿಕಾರ ಅವರಿಗೆ ಮಾತ್ರ ಇದೆ ಎಂದು ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...