- ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ವಾಸವಿರುವ ರಾಹುಲ್ ಗಾಂಧಿ
- ಸೂರತ್ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್
ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿದೆ.
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.
2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಅವರಿಗೆ ಸರಕಾರದ ವತಿಯಿಂದ ನೀಡಲಾಗಿತ್ತು.
ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಈವರೆಗೂ ತನಗೆ ಅಂತಹ ಯಾವುದೇ ನೋಟಿಸ್ ದೊರಕಿಲ್ಲ ಎಂದು ತಿಳಿಸಿದ್ದಾರೆ.
ತನಿಖೆಗೆ ಮತ್ತೆ ಆಗ್ರಹ
ಅದಾನಿ ಸಮೂಹದಲ್ಲಿ ಜನರ ನಿವೃತ್ತಿ ನಿಧಿಯ ಹೂಡಿಕೆಯ ಬಗ್ಗೆ ಹಲವಾರು ಆರೋಪಗಳು ಕೇಳಿಬಂದಿದ್ದರೂ, ತನಿಖೆ ಏಕೆ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಎಲ್‌ಐಸಿಯ ಬಂಡವಾಳ, ಅದಾನಿಗೆ!. ಎಸ್‌ಬಿಐ ಬಂಡವಾಳ, ಅದಾನಿಗೆ!. ಇಪಿಎಫ್‌ಒ ಬಂಡವಾಳವೂ ಅದಾನಿಗೆ! ‘ಮೋದಾನಿ’ ಬಹಿರಂಗಗೊಂಡ ನಂತರವೂ ಸಾರ್ವಜನಿಕರ ನಿವೃತ್ತಿ ಹಣವನ್ನು ಅದಾನಿ ಕಂಪನಿಗಳಲ್ಲಿ ಏಕೆ ಹೂಡಿಕೆ ಮಾಡಲಾಗುತ್ತಿದೆ?’ ಎಂದು ಕೇಳಿದ್ದಾರೆ.
‘ಪ್ರಧಾನ ಮಂತ್ರಿಗಳೇ, ತನಿಖೆ ಇಲ್ಲ, ಉತ್ತರವಿಲ್ಲ! ಇಷ್ಟೊಂದು ಭಯ ಯಾಕೆ ‘ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.