- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ದಾಖಲಿಸಿದ್ದ ಪ್ರಕರಣ
- ಸೂರತ್‌ನ ಕೆಳ ನ್ಯಾಯಾಲಯದ ಪ್ರಕರಣದಲ್ಲಿ ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆ
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೊಂದು ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾಟ್ನಾ ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಆದರೆ ಗುಜರಾತ್‌ನ ಸೂರತ್ ಕೋರ್ಟ್ನಲ್ಲಿರುವ ಪ್ರಕರಣಕ್ಕೆ ಇದು ಸಂಬಂಧವಿಲ್ಲ. ಆ ಪ್ರಕರಣ ಮುಂದುವರಿಯಲಿದೆ.
ಗುಜರಾತಿನ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್‌ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ಪಾಟ್ನಾ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.