ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಮುಂದೇನು ಮಾಡಬಹುದು?

Date:

  • ಉನ್ನತ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ
  • ರಾಹುಲ್‌ ಗಾಂಧಿ ಮುಂದಿದೆ ಬಹುದೊಡ್ಡ ಸವಾಲು

ಕಾಂಗ್ರೆಸ್ ನಾಯಕ ಹಾಗೂ ಕೇರಳದ ವೈನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರ ಮೇಲೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಗುಜರಾತ್ ನ ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿ, ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

ಇದರ ಬೆನ್ನಲ್ಲೆ ಪ್ರತಿಪಕ್ಷದ ಬಹುತೇಕ ನಾಯಕರು ನ್ಯಾಯಾಲಯದ ಆದೇಶದ ವಿರುದ್ಧ ಧ್ವನಿ ಎತ್ತಿವುದರ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಇದಷ್ಟು ಮಾತ್ರವಲ್ಲದೇ ಕಾಂಗ್ರೆಸ್‌ ನಾಯಕರು ಕಾನೂನು ತಜ್ಞರ ಮೊರೆ ಹೋಗಿದ್ದು, ರಾಹುಲ್‌ ಮುಂದಿರುವ ಆಯ್ಕೆಗಳೇನು ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ.

ರಾಹುಲ್‌ ಗಾಂಧಿ ಅವರಿಗೆ ವಿಧಿಸಿರುವ ಅನರ್ಹತೆಯಿಂದ ಪಾರಾಗಬಹುದೇ ಎನ್ನುವ ಪ್ರಶ್ನೆಗಳು ಮೂಡಿದ್ದು, ಇಂತಹ ಪ್ರಕರಣಗಳು ಈ ಹಿಂದೆ ನಡೆದಾಗ ಅವರು ಅನುಸರಿಸಿದ ಮಾರ್ಗಗಳೇನು ಅನ್ನುವ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿಂದೆ ದೇಶದಲ್ಲಿ ನಡೆದಂತಹ ಅನರ್ಹತೆ ಪ್ರಕರಣ ಮತ್ತು ತೀರ್ಪು

ಪ್ರಕರಣ 1

ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಪಿ ಪಿ ಅವರ ಮೇಲೆ ತಮ್ಮ ರಾಜಕೀಯ ಎದುರಾಳಿಯ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ವಿಚಾರಣಾ ನ್ಯಾಯಾಲಯವು ಸಂಸದರಿಗೆ ಶಿಕ್ಷೆ ವಿಧಿಸಿತ್ತು. ಇದರ ಆಧಾರದ ಮೇಲೆ ಲೋಕಸಭಾ ಸೆಕ್ರೆಟರಿಯೇಟ್‌ ಸಂಸದರನ್ನು ಅನರ್ಹಗೊಳಿಸಿತ್ತು.

ಈ ನಿರ್ಧಾರನ್ನು ಪ್ರಶ್ನಿಸಿದ್ದ ಮೊಹಮ್ಮದ್ ಫೈಜಲ್ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಚಾರಣಾ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸುವ ಮೂಲಕ ಲೋಕಸಭಾ ಸೆಕ್ರೆಟರಿಯೇಟ್‌ ಮಾಡಿದ್ದ ಅನರ್ಹತೆಯನ್ನು ನ್ಯಾಯಾಲಯವು ಪರಿಣಾಮಕಾರಿಯಾಗಿ ನಿಷ್ಕ್ರಿಯಗೊಳಿಸಿತು.

ಕೇರಳ ಹೈಕೋರ್ಟ್‌ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಈ ಪ್ರಕರಣದ ವಿಚಾರಣೆ ನಡೆಸಿ, “ಇದೊಂದು ಅಪರೂಪದ ಪ್ರಕರಣವಾಗಿದ್ದು ಶಿಕ್ಷೆಯನ್ನು ಅಮಾನತುಗೊಳಿಸುವ ಅಸಾಧಾರಣ ಸನ್ನಿವೇಶವನ್ನು ಒಳಗೊಂಡಿರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದರು. ಜೊತೆಗೆ ಚುನಾಯಿತ ಅಭ್ಯರ್ಥಿಯ ಅಧಿಕಾರಾವಧಿಯು ಕೇವಲ 15 ತಿಂಗಳಿದ್ದು, ದುಬಾರಿ ಮರುಚುನಾವಣೆ ತಪ್ಪಿಸಲು ಇಂತಹ ತೀರ್ಪು ನೀಡಲಾಗಿದೆ” ಎಂದು ಹೇಳಿದ್ದರು.

ಆದರೆ, ಲಕ್ಷದೀಪ ಆಡಳಿತವು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠವು ಕೇರಳ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ, ಅನರ್ಹತೆ ರದ್ದತಿ ಆದೇಶಕ್ಕೆ ಬಲ ನೀಡಿತ್ತು.

ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿತು. ಆ ಮೂಲಕ ಲೋಕಸಭಾ ಸೆಕ್ರೆಟರಿಯೇಟ್‌ ಮಾಡಿದ್ದ ಅನರ್ಹತೆಯನ್ನು ನ್ಯಾಯಾಲಯ ಪರಿಣಾಮಕಾರಿಯಾಗಿ ನಿಷ್ಕ್ರಿಯಗೊಳಿಸಿತು.

ದುಬಾರಿ ಮರುಚುನಾವಣೆ ತಪ್ಪಿಸಲು ಮತ್ತು ಚುನಾಯಿತ ಅಭ್ಯರ್ಥಿಯ ಅಧಿಕಾರಾವಧಿ ಕೇವಲ 15 ತಿಂಗಳಿವೆ ಎಂಬುದನ್ನು ಪರಿಗಣಿಸಿ ಇಂತಹ ತೀರ್ಪು ನೀಡಲಾಗಿದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಆದೇಶದಲ್ಲಿ ತಿಳಿಸಿದ್ದರು. ಹೀಗಾಗಿ, ಇದು ಅಪರೂಪದ ಪ್ರಕರಣವಾಗಿದ್ದು ಶಿಕ್ಷೆಯನ್ನು ಅಮಾನತುಗೊಳಿಸುವ ಅಸಾಧಾರಣ ಸನ್ನಿವೇಶವನ್ನು ಒಳಗೊಂಡಿರುತ್ತದೆ ಎಂದು ಹೈಕೋರ್ಟ್ ಹೇಳಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಲಕ್ಷದೀಪ ಆಡಳಿತವು ಮೇಲ್ಮನವಿ ಸಲ್ಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದರಿಂದ ಅನರ್ಹತೆ ರದ್ದತಿ ಆದೇಶಕ್ಕೆ ಬಲ ದೊರೆತಿತ್ತು.

ಪ್ರಕರಣ 2

ಲೋಕ್ ಪ್ರಹರಿ ಮತ್ತು ಭಾರತ ಒಕ್ಕೂಟ ಪ್ರಕರಣದಲ್ಲಿ 2018ರಲ್ಲಿ ಸಿಜೆಐ ಆಗಿದ್ದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಮ್ ಖಾನ್ವಿಲ್ಕರ್ ಹಾಗೂ ಡಿ ವೈ ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿ, 2018ರಲ್ಲಿ ನೀಡಿದ ತೀರ್ಪಿನ ಪ್ರಕಾರ, ಸಿಆರ್‌ಪಿಸಿ ಸೆಕ್ಷನ್ 389ರ ಅಡಿಯಲ್ಲಿ ಶಿಕ್ಷೆಯನ್ನು ತಡೆದಾಗ ಸೆಕ್ಷನ್ 8ರ ಅಡಿಯಲ್ಲಿನ ಅನರ್ಹತೆಯು ಕಾರ್ಯಗತಗೊಳ್ಳದು” ಎಂದು ಹೇಳಿದ್ದರು.

“ದೋಷಿ ಎನ್ನುವ ತೀರ್ಪಿಗೆ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸಿದಾಗ, ನ್ಯಾಯಾಲಯವು ತಡೆಯಾಜ್ಞೆ ನೀಡಿದರೆ, ಅದು ಅಸಮರ್ಥನೀಯ ಅಥವಾ ಕ್ಷುಲ್ಲಕ ಕಾರಣದ ಆಧಾರದಲ್ಲಿ ಮಾಡಲಾದ ದೋಷ ನಿರ್ಣಯವು ಗಂಭೀರ ಪೂರ್ವಗ್ರಹಕ್ಕೆ ಕಾರಣವಾಗದಂತೆ ಖಚಿತಪಡಿಸುತ್ತದೆ” ಎಂದು ತೀರ್ಪು ನೀಡಿದ್ದರು.

ಹಾಗಾದರೆ ರಾಹುಲ್ ಏನು ಮಾಡಬಹುದು?

ಸೂರತ್ ನ್ಯಾಯಾಲಯವು ರಾಹುಲ್‌ ವಿರುದ್ದ ನೀಡಿದ ತೀರ್ಪನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮೊರೆ ಹೋಗಬೇಕು. ಉನ್ನತ ನ್ಯಾಯಾಲಯವು ಸೂರತ್‌ ನ್ಯಾಯಾಲಯ ನೀಡಿದ ತೀರ್ಪನ್ನು ಬದಿಗೆ ಸರಿಸುವುದರ ಜೊತೆಗೆ ತಡೆ ನೀಡಿದಾಗ ಮಾತ್ರ ರಾಹುಲ್‌ ಅವರ ಅನರ್ಹತೆ ರದ್ದಾಗಲಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿಯ ಏಕೈಕ ಸಂಸದ ಬಿಜೆಪಿ ಸೇರ್ಪಡೆ

ಎಎಪಿ ಯಿಂದ ಆಯ್ಕೆಯಾಗಿದ್ದ ಏಕೈಕ ಸಂಸತ್ ಸದಸ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್‌ನ...

ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು...

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ...